ಬಸ್ ಬೈಕ್‌ಗೆ ಡಿಕ್ಕಿ; ಸವಾರ ಸಾ*ವು

ಮಂಗಳೂರು: ಕುಳೂರು ಸೇತುವೆ ಸಮೀಪ ಬಸ್ ಬೈಕ್‌ಗೆ ಡಿಕ್ಕಿಯಾಗಿ ಗಂಭೀರ ಗಾಯಗೊಂಡ ಬೈಕ್‌ ಸವಾರ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ನಡೆದಿದೆ.

ನಿಮ್ಮ ಮನೆ/ಆಸ್ತಿ ಮಾರಾಟ ಮತ್ತು ಖರೀದಿಗೆ ಇಲ್ಲಿದೆ ಸುವರ್ಣ ಅವಕಾಶ! ಈಗಲೇ ಈ ಲಿಂಕ್ ಕ್ಲಿಕ್ ಮಾಡಿ ಗುಂಪಿಗೆ ಸೇರಿಕೊಳ್ಳಿ

ದೀಕ್ಷಿತ್ (23) ಮೃತ ಸವಾರ.

ದೀಕ್ಷಿತ್‌ ಬೈಕ್‌ನಲ್ಲಿ ಉಡುಪಿ-ಮಂಗಳೂರು ರಸ್ತೆಯಲ್ಲಿ ಕೂಳೂರು ಸೇತುವೆ ಸಮೀಪದ ಬಸ್ ನಿಲ್ದಾಣದ ಬಳಿ ಹೋಗುತ್ತಿದ್ದ ವೇಳೆ ಅದೇ ರಸ್ತೆಯಲ್ಲಿ ಬಂದ ಬಸ್ ಡಿಕ್ಕಿಯಾಗಿದ್ದು, ಡಿಕ್ಕಿಯ ರಭಸಕ್ಕೆ ಮೋಟಾರ್ ಸೈಕಲ್ ಸಮೇತ ದೀಕ್ಷಿತ್ ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡಿದ್ದರು.

ಕೂಡಲೇ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

error: Content is protected !!