ರಾಜ್ಯದ ಹಲವೆಡೆ ಇಂದು, ನಾಳೆ ಗುಡುಗು ಸಹಿತ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಬಿಸಿಲಿನ ತಾಪ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವ ಬೆನ್ನಲ್ಲೇ, ಉತ್ತರ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳ ಜನತೆಗೆ ಹವಾಮಾನ ಇಲಾಖೆ ತಂಪು ಸುದ್ದಿಯೊಂದನ್ನು ನೀಡಿದೆ. ಇಂದು ಮತ್ತು ನಾಳೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ಮಾಹಿತಿ ನೀಡಿದೆ.

ಹವಾಮಾನ ಇಲಾಖೆಯ ವರದಿಯ ಪ್ರಕಾರ, ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ ಹಾಗೂ ಗದಗ ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಂಭವವಿದೆ. ಮಳೆಯ ಸಮಯದಲ್ಲಿ ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದ್ದು, ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

ನಿಮ್ಮ ಮನೆ/ಆಸ್ತಿ ಮಾರಾಟ ಮತ್ತು ಖರೀದಿಗೆ ಇಲ್ಲಿದೆ ಸುವರ್ಣ ಅವಕಾಶ! ಈಗಲೇ ಈ ಲಿಂಕ್ ಕ್ಲಿಕ್ ಮಾಡಿ ಗುಂಪಿಗೆ ಸೇರಿಕೊಳ್ಳಿ

ದಕ್ಷಿಣ ಒಳನಾಡಿನ ಮೈಸೂರು, ಕೊಡಗು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿಯೂ ಅಲ್ಲಲ್ಲಿ ತುಂತುರು ಮಳೆಯಾಗುವ ಸಾಧ್ಯತೆಯಿದೆ. ಇನ್ನು ರಾಜಧಾನಿ ಬೆಂಗಳೂರಿನಲ್ಲಿ ಇಂದು ಭಾಗಶಃ ಮೋಡ ಕವಿದ ವಾತಾವರಣವಿರಲಿದ್ದು, ಸಂಜೆ ಅಥವಾ ರಾತ್ರಿಯ ವೇಳೆ ನಗರದ ಕೆಲವು ಭಾಗಗಳಲ್ಲಿ ಹಗುರ ಮಳೆಯಾಗುವ ಶೇ. 30ರಷ್ಟು ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿಯಲ್ಲಿ ಮುಂದುವರಿದ ಸೆಖೆ:
ಒಳನಾಡಿನಲ್ಲಿ ಮಳೆಯ ಮುನ್ಸೂಚನೆ ಇದ್ದರೂ, ಕರಾವಳಿ ಜಿಲ್ಲೆಗಳಲ್ಲಿ ಮಾತ್ರ ಉಷ್ಣಾಂಶ ಇನ್ನಷ್ಟು ಏರಿಕೆಯಾಗಲಿದೆ. ಸಮುದ್ರ ತೀರದ ಜಿಲ್ಲೆಗಳಲ್ಲಿ ಬಿಸಿಲ ಧಗೆ ಮತ್ತು ಸೆಖೆಯ ವಾತಾವರಣ ಮುಂದುವರಿಯಲಿದ್ದು, ಗರಿಷ್ಠ ತಾಪಮಾನ ದಾಖಲಾಗುವ ಸಾಧ್ಯತೆಯಿದೆ.

error: Content is protected !!