ಅದೇನು ಗ್ಯಾಂಬ್ಲಿಂಗ್ ಅಲ್ಲ…ಸಚಿವ ಸ್ಥಾನ ಕೇಳೋದ್ರಲ್ಲಿ ತಪ್ಪಿಲ್ಲ, ಅವರಿಗೆ ಅರ್ಹತೆ ಇದೆ ಕೇಳ್ತಾರೆ : ಗೃಹ ಸಚಿವ ಪರಮೇಶ್ವರ್

ಬೆಂಗಳೂರು: ಹಿರಿಯ ಶಾಸಕರು ಸಚಿವ ಸ್ಥಾನ ಕೇಳೋದ್ರಲ್ಲಿ ತಪ್ಪಿಲ್ಲ…ಅದೇನು ಗ್ಯಾಂಬ್ಲಿಂಗ್ ಅಲ್ಲ, ಅವರಿಗೆ ಅರ್ಹತೆ ಇದೆ ಕೇಳ್ತಾರೆ ಎಂದು ಗೃಹ ಸಚಿವ ಪರಮೇಶ್ವರ್ ಅವರು ತಿಳಿಸಿದ್ದಾರೆ.

ನಿಮ್ಮ ಎಲ್ಲಾ ರೀತಿಯ ಡಾಕ್ಯುಮೆಂಟೇಶನ್ ಮತ್ತು ಲೀಗಲ್ ಸರ್ವಿಸ್‌ ಅಗತ್ಯತೆಗಾಗಿ ಈಗಲೇ ಈ ಲಿಂಕ್ ಅನ್ನು ಕ್ಲಿಕ್ ಮಾಡಿ ಗ್ರೂಪ್ ಸೇರಿಕೊಳ್ಳಿ⬇️

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶಾಸಕರಾಗಿ ಎರಡು ಮೂರು ಬಾರಿ ಗೆದ್ದಿದ್ದಾರೆ. ಅವರು ಸಚಿವರಾಗಲು ಸಮರ್ಥರು. ಹೀಗಾಗಿ ಸಚಿವ ಸ್ಥಾನ ಕೇಳೋದ್ರಲ್ಲಿ ಯಾವ ತಪ್ಪೂ ಇಲ್ಲ. ಆದರೆ ಅದರ ಬಗ್ಗೆ ಸಿಎಂ ಮತ್ತು ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಬಹಿರಂಗವಾಗಿ ಕೇಳಬಹುದು, ಅದೇನು ಗ್ಯಾಂಬ್ಲಿಂಗ್ ಅಲ್ಲ. ಅವರಿಗೆ ಅರ್ಹತೆ ಇದೆ ಕೇಳ್ತಾರೆ. ನಾಯಕತ್ವ ವಿಚಾರ ಇರಲಿ, ಪುನಾರಚನೆ ಇರಲಿ ಹೈಕಮಾಂಡ್ ಮಾತ್ರವೇ ತೀರ್ಮಾನ ಮಾಡಬೇಕು. ಹೈಕಮಾಂಡ್ ಎಲ್ಲ ಗಮನಿಸಿದೆ, ಅವರಿಗೆ ಎಲ್ಲ ಗೊತ್ತಿದೆ. ಯಾವ ಸಂದರ್ಭದಲ್ಲಿ ಏನು ಮಾಡಬೇಕು ಅಂತ ಹೈಕಮಾಂಡ್‌ಗೆ ಗೊತ್ತಿದೆ, ಅವರು ಮಾಡ್ತಾರೆ ಎಂದಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಸ್ಥಾನದ ಕುರಿತು ಮಾತನಾಡಿದ ಪರಮೇಶ್ವರ್ ಅವರು, ಈಗ ಪುನಾರಚನೆ ಚರ್ಚೆ ಆಗ್ತಿದೆ ಅಷ್ಟೇ. ಅಧ್ಯಕ್ಷ ಸ್ಥಾನ ವಿಚಾರ ಹೈಕಮಾಂಡ್‌ಗೆ ಬಿಟ್ಟಿದ್ದು, ಅದರ ಬಗ್ಗೆ ಹೈಕಮಾಂಡ್ ನಿರ್ಧಾರ ಮಾಡುತ್ತೆ. ಅನೇಕರಿಂದ ಮಾಹಿತಿ ಪಡೆದು ಹೈಕಮಾಂಡ್ ನಿರ್ಧಾರ ಮಾಡ್ತಾರೆ ಎಂದು ತಿಳಿಸಿದ್ದಾರೆ.

ನಿಮ್ಮ ಮನೆ/ಆಸ್ತಿ ಮಾರಾಟ ಮತ್ತು ಖರೀದಿಗೆ ಇಲ್ಲಿದೆ ಸುವರ್ಣ ಅವಕಾಶ! ಈಗಲೇ ಈ ಲಿಂಕ್ ಕ್ಲಿಕ್ ಮಾಡಿ ಗುಂಪಿಗೆ ಸೇರಿಕೊಳ್ಳಿ

ಏನಾದ್ರೂ ಬದಲಾವಣೆ ಇದ್ದರೆ ಹೈಕಮಾಂಡ್ ತೀರ್ಮಾನ ಮಾಡಿದ್ರೆ ಅದಕ್ಕೆ ನಾವು ಒಪ್ಪಲೇಬೇಕು. ಒಪ್ಪೋದಿಲ್ಲ ಅನ್ನೋ ಪ್ರಶ್ನೆಯೇ ಬರಲ್ಲ. ನಾನಾಗಲೀ, ರಾಮಲಿಂಗಾರೆಡ್ಡಿ ಆಗಲೀ, ಜಾರ್ಜ್ ಆಗಲೀ ನಾವೆಲ್ಲ ಸೀನಿಯರ್ಸ್ ಇದ್ದೀವಿ. ನಮ್ಮನ್ನು ನೀವು ಬದಲಾಯಿಸಿಕೊಳ್ಳಬೇಕು ಅಂತ ಅವ್ರು ತೀರ್ಮಾನ ಮಾಡಿದ್ರೆ ಆಗ ನಾವು ಪ್ರಶ್ನೆ ಮಾಡಲು ಬರೋದೇ ಇಲ್ಲ ಎಂದು ಹೇಳಿದ್ದಾರೆ.

error: Content is protected !!