ಡಿವೈಡರ್‌ಗೆ ಡಿಕ್ಕಿಯಾಗಿ ಕಾರು ಪಲ್ಟಿ; ಓರ್ವ ಸಾ*ವು, ಮತ್ತೋರ್ವ ಗಂಭೀರ

ಕೋಲಾರ: ಡಿವೈಡರ್‌ಗೆ ಡಿಕ್ಕಿಯಾಗಿ ಕಾರು ಪಲ್ಟಿಯಾದ ಪರಿಣಾಮ ಓರ್ವ ಮೃತಪಟ್ಟಿದ್ದು, ಮತ್ತೊಬ್ಬ ಗಂಭೀರ ಗಾಯಗೊಂಡಿರುವ ಘಟನೆ ಇಂದು(ಏ.13) ಮುಂಜಾನೆ ಕೋಲಾರ ಜಿಲ್ಲೆಯ ಕೆಜಿಎಫ್ ತಾಲೂಕಿನ ದೊಡ್ಡಕಾರಿ ಬಳಿ ನಡೆದಿದೆ.

ನಿಮ್ಮ ಎಲ್ಲಾ ರೀತಿಯ ಡಾಕ್ಯುಮೆಂಟೇಶನ್ ಮತ್ತು ಲೀಗಲ್ ಸರ್ವಿಸ್‌ ಅಗತ್ಯತೆಗಾಗಿ ಈಗಲೇ ಈ ಲಿಂಕ್ ಅನ್ನು ಕ್ಲಿಕ್ ಮಾಡಿ ಗ್ರೂಪ್ ಸೇರಿಕೊಳ್ಳಿ⬇️

ಚೆನ್ನೈ ಮೂಲದ ದೇವಾನಂದ್(24) ಮೃತ ವ್ಯಕ್ತಿ. ಸರ್ವೇಶ್ ಗಂಭೀರ ಗಾಯಗೊಂಡ ಯುವಕ. ಇನ್ನಿಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿದೆ.

ಇಂದು ಮುಂಜಾನೆ ಬೆಂಗಳೂರಿನಿಂದ ಚೆನ್ನೈಗೆ ತೆರಳುತ್ತಿದ್ದ ಕ್ರೇಟಾ ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿಯಾಗಿ ನಾಲ್ಕೈದು ಪಲ್ಟಿಯಾಗಿರುವ ಸಾಧ್ಯತೆ ಇದೆ. ಓರ್ವ ಘಟನೆಯ ಪರಿಣಾಮ ದೇವಾನಂದ್‌ ಸಾವನ್ನಪ್ಪಿದ್ದು, ಮತ್ತೋರ್ವ ಯುವಕ ಸರ್ವೇಶ್‌ ತೀವ್ರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾನೆ. ಇನ್ನಿಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ.

ಬೇತಮಂಗಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಕೈಗೊಂಡಿದ್ದಾರೆ.‌

error: Content is protected !!