
ಶಿವಮೊಗ್ಗ: ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿ ಹೊಡೆದ ಘಟನೆ ಪಟ್ಟಣದ ಶಿವಮೊಗ್ಗ ರಸ್ತೆಯಲ್ಲಿ ಇಂದು(ಏ.13) ಸಂಭವಿಸಿದ್ದು, ಘಟನೆ ಪರಿಣಾಮ ಹಲವು ಪ್ರಯಾಣಿಕರಿಗೆ ಗಾಯಗಳಾಗಿವೆ.

ಶಿವಮೊಗ್ಗದಿಂದ ಶಿಕಾರಿಪುರ ಪಟ್ಟಣಕ್ಕೆ ಬಸ್ ಆಗಮಿಸುತ್ತಿದ್ದು, ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಇಪ್ಪತ್ತಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗಳಾಗಿವೆ. ಗಾಯಗೊಂಡ ಪ್ರಯಾಣಿಕರನ್ನು ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಯಿತು.

ತೀವ್ರವಾಗಿ ಗಾಯಗೊಂಡ ಹತ್ತಕ್ಕೂ ಹೆಚ್ಚು ಪ್ರಯಾಣಿಕರನ್ನು ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿದೆ.
