ಹೆಲ್ಮೆಟ್ ಧರಿಸದೆ ಬುಲೆಟ್ ಸವಾರಿ: ವಿವಾದಕ್ಕೆ ಸಿಲುಕಿದ ‘ಡಿಂಪಲ್ ಕ್ವೀನ್’ ರಚಿತಾ ರಾಮ್!

ಬೆಂಗಳೂರು: ಕನ್ನಡ ಚಿತ್ರರಂಗದ ಜನಪ್ರಿಯ ನಟಿ ರಚಿತಾ ರಾಮ್ ಅವರು ಸಂಚಾರ ನಿಯಮಗಳನ್ನು ಉಲ್ಲಂಘಿಸಿ ಬುಲೆಟ್ ಬೈಕ್ ಸವಾರಿ ಮಾಡಿರುವ ವಿಡಿಯೋವೊಂದು ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಸಾರ್ವಜನಿಕ ವಲಯದಲ್ಲಿ ನಟಿಯ ಬೇಜವಾಬ್ದಾರಿತನದ ಬಗ್ಗೆ ಆಕ್ರೋಶ ವ್ಯಕ್ತವಾಗುತ್ತಿದೆ.

ಏನಿದು ಘಟನೆ?:
ವೈರಲ್ ಆಗಿರುವ ವಿಡಿಯೋದಲ್ಲಿ ರಚಿತಾ ರಾಮ್ ಅವರು ರಾಯಲ್ ಎನ್‌ಫೀಲ್ಡ್ ಬುಲೆಟ್ ಬೈಕ್‌ನ ಹಿಂಬದಿಯಲ್ಲಿ ಕುಳಿತು ಸಂಚರಿಸುತ್ತಿರುವುದು ಕಂಡುಬಂದಿದೆ. ಈ ವೇಳೆ ಸವಾರಿಯಲ್ಲಿದ್ದ ನಟಿ ಹಾಗೂ ಬೈಕ್ ಚಾಲನೆ ಮಾಡುತ್ತಿದ್ದ ಯುವತಿ ಇಬ್ಬರೂ ಹೆಲ್ಮೆಟ್ ಧರಿಸಿಲ್ಲ. ಇದು ಸಂಚಾರ ನಿಯಮಗಳ ಸ್ಪಷ್ಟ ಉಲ್ಲಂಘನೆಯಾಗಿದ್ದು, ನೆಟ್ಟಿಗರು ನಟಿಯ ವಿರುದ್ಧ ದೂರು ನೀಡುವಂತೆ ಒತ್ತಾಯಿಸುತ್ತಿದ್ದಾರೆ.

ನಿಮ್ಮ ಎಲ್ಲಾ ರೀತಿಯ ಡಾಕ್ಯುಮೆಂಟೇಶನ್ ಮತ್ತು ಲೀಗಲ್ ಸರ್ವಿಸ್‌ ಅಗತ್ಯತೆಗಾಗಿ ಈಗಲೇ  ಇಲ್ಲಿ ಕ್ಲಿಕ್ ಮಾಡಿ ಗ್ರೂಪ್ ಸೇರಿಕೊಳ್ಳಿ⬇️

ಬೈಕ್ ಚಾಲನೆ ಮಾಡುತ್ತಿದ್ದ ಯುವತಿಯ ವಯಸ್ಸಿನ ಬಗ್ಗೆಯೂ ಸಾಮಾಜಿಕ ಜಾಲತಾಣಗಳಲ್ಲಿ ಅನುಮಾನ ವ್ಯಕ್ತವಾಗುತ್ತಿದೆ. ಆಕೆ ಅಪ್ರಾಪ್ತ ವಯಸ್ಕಳೇ ಅಥವಾ ಪರವಾನಗಿ ಹೊಂದಿದ್ದಾಳೆಯೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸಬೇಕು ಎಂದು ಜನರು ಒತ್ತಾಯಿಸಿದ್ದಾರೆ. ಬೆಂಗಳೂರು ಸಂಚಾರ ಪೊಲೀಸರ ನಿಯಮದಂತೆ ಸವಾರ ಮತ್ತು ಹಿಂಬದಿ ಸವಾರ ಇಬ್ಬರಿಗೂ ಹೆಲ್ಮೆಟ್ ಕಡ್ಡಾಯ. ಇಲ್ಲದಿದ್ದಲ್ಲಿ ಕನಿಷ್ಠ 500 ರೂಪಾಯಿ ದಂಡ ವಿಧಿಸಲಾಗುತ್ತದೆ.

“ಲಕ್ಷಾಂತರ ಅಭಿಮಾನಿಗಳನ್ನು ಹೊಂದಿರುವ ನಟ-ನಟಿಯರೇ ನಿಯಮ ಮುರಿದರೆ ಸಮಾಜಕ್ಕೆ ಯಾವ ಸಂದೇಶ ಹೋಗುತ್ತದೆ?” ಎಂದು ಸಾರ್ವಜನಿಕರು ಪ್ರಶ್ನಿಸುತ್ತಿದ್ದಾರೆ.

ಈ ವಿಡಿಯೋ ಯಾವುದಾದರೂ ಸಿನೆಮಾ ಚಿತ್ರೀಕರಣದ ಭಾಗವೇ ಅಥವಾ ವೈಯಕ್ತಿಕ ಪ್ರವಾಸವೇ ಎಂಬ ಬಗ್ಗೆ ಇನ್ನೂ ಸ್ಪಷ್ಟನೆ ಸಿಕ್ಕಿಲ್ಲ. ಈ ಬಗ್ಗೆ ರಚಿತಾ ರಾಮ್ ಅವರೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಸಂಚಾರ ಪೊಲೀಸರು ಈ ವೈರಲ್ ವಿಡಿಯೋ ಆಧಾರದ ಮೇಲೆ ಸುಮೋಟೋ ಕೇಸ್ ದಾಖಲಿಸಿಕೊಳ್ಳುತ್ತಾರೆಯೇ ಅಥವಾ ನೋಟಿಸ್ ನೀಡುತ್ತಾರೆಯೇ ಎಂಬುದನ್ನು ಕಾದು ನೋಡಬೇಕಿದೆ.

error: Content is protected !!