ಸಿಮೆಂಟ್ ಶೀಟ್ ತುಂಬಿದ್ದ ಟ್ರ್ಯಾಕ್ಟರ್ ಆಯತಪ್ಪಿ ಹೆದ್ದಾರಿಯಲ್ಲೇ ಪಲ್ಟಿ!!

ಕೊಟ್ಟಿಗೆಹಾರ: ಸಿಮೆಂಟ್ ಶೀಟ್ ತುಂಬಿದ್ದ ಟ್ರ್ಯಾಕ್ಟರ್ ಆಯತಪ್ಪಿ ಹೆದ್ದಾರಿಯಲ್ಲೇ ಪಲ್ಟಿಯಾಗಿದ್ದು, ಚಾಲಕ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ದೇವನಗುಲ್ ಎಂಬಲ್ಲಿ ಇಂದು(ಏ.14) ನಡೆದಿದೆ.

ನಿಮ್ಮ ಎಲ್ಲಾ ರೀತಿಯ ಡಾಕ್ಯುಮೆಂಟೇಶನ್ ಮತ್ತು ಲೀಗಲ್ ಸರ್ವಿಸ್‌ ಅಗತ್ಯತೆಗಾಗಿ ಈಗಲೇ ಈ ಲಿಂಕ್ ಅನ್ನು ಕ್ಲಿಕ್ ಮಾಡಿ ಗ್ರೂಪ್ ಸೇರಿಕೊಳ್ಳಿ.

ಕಳಸದಿಂದ ಮೂಡಿಗೆರೆ ಕಡೆಗೆ ಸಿಮೆಂಟ್ ಶೀಟ್‌ಗಳನ್ನು ತುಂಬಿದ್ದ ಟ್ರ್ಯಾಕ್ಟರ್, ದೇವನಗುಲ್ ಸಮೀಪದ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ರಸ್ತೆಯ ಮಧ್ಯಭಾಗದಲ್ಲೇ ಪಲ್ಟಿಯಾಗಿದ್ದು, ಅದರಲ್ಲಿದ್ದ ಸಿಮೆಂಟ್ ಶೀಟ್‌ಗಳು ರಸ್ತೆಯುದ್ದಕ್ಕೂ ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ. ಇದರಿಂದಾಗಿ ಕೊಟ್ಟಿಗೆಹಾರದಿಂದ ಹೊರನಾಡು ಮತ್ತು ಶೃಂಗೇರಿ ಕಡೆಗೆ ಸಾಗುವ ಪ್ರಮುಖ ಸಂಪರ್ಕ ರಸ್ತೆಯಲ್ಲಿ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿತ್ತು.

ಹೆದ್ದಾರಿಯ ಮಧ್ಯದಲ್ಲೇ ಟ್ರ್ಯಾಕ್ಟರ್ ಬಿದ್ದಿದ್ದರಿಂದ ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ಕಿಲೋಮೀಟರ್‌ಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಗಿತ್ತು.

ಸ್ಥಳೀಯರ ಸಹಾಯದಿಂದ ಟ್ರ್ಯಾಕ್ಟರ್ ತೆರವುಗೊಳಿಸಿದ ನಂತರ ವಾಹನ ಸಂಚಾರ ಪುನಃ ಆರಂಭಗೊಂಡಿದೆ.

error: Content is protected !!