ನಂತೂರು ಅಪಘಾತ: ಚಿಕಿತ್ಸೆ ಫಲಕಾರಿಯಾಗದೆ ಹಿರಿಯ ಛಾಯಾಗ್ರಾಹಕ ಮೋಹನ್ ಚಂದರ್ ನಿಧನ

ಮಂಗಳೂರು: ಕಳೆದ ಶನಿವಾರ ನಂತೂರು ತಾರಾಯಿತೋಟ ಸಮೀಪ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಹಿರಿಯ ಛಾಯಾಗ್ರಾಹಕ, ನಾಗುರಿ ನಿವಾಸಿ ಕೆ. ಮೋಹನ್ ಚಂದರ್ (64) ಅವರು ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಬೆಳಗ್ಗೆ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಏಪ್ರಿಲ್ 11ರ ಶನಿವಾರ ರಾತ್ರಿ ರಾಷ್ಟ್ರೀಯ ಹೆದ್ದಾರಿ 66ರ ನಂತೂರು ಬಳಿ ಈ ಅಪಘಾತ ಸಂಭವಿಸಿತ್ತು. ಧರ್ಮಸ್ಥಳದ ಕಾರ್ಯತಡ್ಕ ನಿವಾಸಿ ಗೋಪಾಲಕೃಷ್ಣ (27) ಎಂಬುವವರು ಚಲಾಯಿಸುತ್ತಿದ್ದ ಬೈಕ್, ಓವರ್‌ಟೇಕ್ ಮಾಡುವ ಭರದಲ್ಲಿ ಮೋಹನ್ ಚಂದರ್ ಅವರ ಸ್ಕೂಟರ್‌ಗೆ ಢಿಕ್ಕಿ ಹೊಡೆದಿತ್ತು. ಢಿಕ್ಕಿಯ ರಭಸಕ್ಕೆ ಮೋಹನ್ ಚಂದರ್ ಅವರು ರಸ್ತೆಗೆ ಎಸೆಯಲ್ಪಟ್ಟು ತಲೆಗೆ ಗಂಭೀರ ಗಾಯಗಳಾಗಿದ್ದವು. ಸ್ಕೂಟರ್‌ಗೆ ಢಿಕ್ಕಿ ಹೊಡೆದ ಬಳಿಕ ನಿಯಂತ್ರಣ ತಪ್ಪಿದ ಬೈಕ್, ಮೈನ್ಸ್ ಸಾಗಾಟದ ಟಿಪ್ಪರ್‌ಗೆ ಬಡಿದ ಪರಿಣಾಮ ಬೈಕ್ ಸವಾರ ಗೋಪಾಲಕೃಷ್ಣ ಸ್ಥಳದಲ್ಲೇ ಮೃತಪಟ್ಟಿದ್ದನು.

ನಿಮ್ಮ ಎಲ್ಲಾ ರೀತಿಯ ಡಾಕ್ಯುಮೆಂಟೇಶನ್ ಮತ್ತು ಲೀಗಲ್ ಸರ್ವಿಸ್‌ ಅಗತ್ಯತೆಗಾಗಿ ಈಗಲೇ ಈ ಲಿಂಕ್ ಅನ್ನು ಕ್ಲಿಕ್ ಮಾಡಿ ಗ್ರೂಪ್ ಸೇರಿಕೊಳ್ಳಿ.

ಅಪಘಾತದ ಭೀಕರ ದೃಶ್ಯವು ಆ ವೇಳೆ ರಸ್ತೆಯಲ್ಲಿ ಚಲಿಸುತ್ತಿದ್ದ ಗಂಗಾಧರ ಅಂಬ್ಲಮೊಗರು ಎಂಬುವವರ ಗೂಡ್ಸ್ ಟೆಂಪೋದ ಡ್ಯಾಶ್‌ಬೋರ್ಡ್ ಕ್ಯಾಮೆರಾದಲ್ಲಿ ದಾಖಲಾಗಿದೆ. ಅಪಘಾತ ಸಂಭವಿಸಿದ ತಕ್ಷಣ ಗಂಗಾಧರ ಅವರು ಸ್ಥಳೀಯರ ನೆರವಿನೊಂದಿಗೆ ಗಾಯಾಳು ಮೋಹನ್ ಚಂದರ್ ಅವರನ್ನು ಕಂಕನಾಡಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ತಲೆಗೆ ತೀವ್ರ ಪೆಟ್ಟು ಬಿದ್ದಿದ್ದರಿಂದ ಚಿಕಿತ್ಸೆಗೆ ಸ್ಪಂದಿಸದೆ ಅವರು ಮೃತಪಟ್ಟಿದ್ದಾರೆ.

ದಕ್ಷಿಣ ಕನ್ನಡ–ಉಡುಪಿ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್‌ನ ಸಕ್ರಿಯ ಸದಸ್ಯರಾಗಿದ್ದ ಮೋಹನ್ ಚಂದರ್ ಅವರ ನಿಧನಕ್ಕೆ ಅಸೋಸಿಯೇಷನ್ ಹಾಗೂ ವಿವಿಧ ಸಂಘ ಸಂಸ್ಥೆಗಳು ತೀವ್ರ ಸಂತಾಪ ವ್ಯಕ್ತಪಡಿಸಿವೆ. ಮೃತರು ಪತ್ನಿ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

ನಿಮ್ಮ ಮನೆ/ಆಸ್ತಿ ಮಾರಾಟ ಮತ್ತು ಖರೀದಿಗೆ ಇಲ್ಲಿದೆ ಸುವರ್ಣ ಅವಕಾಶ! ಈಗಲೇ ಈ ಲಿಂಕ್ ಕ್ಲಿಕ್ ಮಾಡಿ ಗುಂಪಿಗೆ ಸೇರಿಕೊಳ್ಳಿ

ಮನೆಯಲ್ಲಿ ಮದುವೆಯ ಸಂಭ್ರಮವಿತ್ತು:
ಪದವಿನಂಗಡಿಯಲ್ಲಿ ‘ನವ್ಯ ಸ್ಟುಡಿಯೋ’ ನಡೆಸುತ್ತಿದ್ದ ಮೋಹನ್ ಚಂದರ್ ಅವರು ವೃತ್ತಿಪರ ಛಾಯಾಗ್ರಾಹಕರಾಗಿ ಚಿರಪರಿಚಿತರಾಗಿದ್ದರು. ಇವರ ಹಿರಿಯ ಪುತ್ರಿಯ ವಿವಾಹವು ಇದೇ ಮೇ 10ರಂದು ನಿಗದಿಯಾಗಿತ್ತು. ಮಗಳ ಮದುವೆಗೆ ಸಕಲ ಸಿದ್ಧತೆಗಳು ನಡೆಯುತ್ತಿದ್ದು, ಮನೆಯಲ್ಲಿ ಸಂಭ್ರಮದ ವಾತಾವರಣವಿತ್ತು. ಆದರೆ ಈ ಅನಿರೀಕ್ಷಿತ ದುರಂತದಿಂದ ಕುಟುಂಬದಲ್ಲಿ ಶೋಕದ ಛಾಯೆ ಆವರಿಸಿದೆ.

error: Content is protected !!