ಹಿರಿಯ ಬಿಜೆಪಿ ನಾಯಕ ರಾಮಚಂದ್ರ ಬೈಕಂಪಾಡಿಯವರ ನಿಧನಕ್ಕೆ ಶಾಸಕ ಕಾಮತ್ ಸಂತಾಪ

ಮಂಗಳೂರು: ಬಿಜೆಪಿಯ ಹಿರಿಯ ನಾಯಕರು, ಮೊಗವೀರ ಸಮುದಾಯದ ಮುಂದಾಳು, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ, ಕೆ.ಎಫ್.ಡಿ.ಸಿ ಯ ಮಾಜಿ ಅಧ್ಯಕ್ಷರಾಗಿದ್ದ ರಾಮಚಂದ್ರ ಬೈಕಂಪಾಡಿಯವರ ನಿಧನಕ್ಕೆ ಶಾಸಕ ವೇದವ್ಯಾಸ ಕಾಮತ್‌ರವರು ತೀವ್ರ ಸಂತಾಪ ವ್ಯಕ್ತಪಡಿಸಿದರು.

ನಿಮ್ಮ ಎಲ್ಲಾ ರೀತಿಯ ಡಾಕ್ಯುಮೆಂಟೇಶನ್ ಮತ್ತು ಲೀಗಲ್ ಸರ್ವಿಸ್‌ ಅಗತ್ಯತೆಗಾಗಿ ಈಗಲೇ ಈ ಲಿಂಕ್ ಅನ್ನು ಕ್ಲಿಕ್ ಮಾಡಿ ಗ್ರೂಪ್ ಸೇರಿಕೊಳ್ಳಿ.

ಪಕ್ಷ ಸಂಘಟನೆ, ಧರ್ಮ ಕಾರ್ಯ, ಸಾಮಾಜಿಕ ಹಾಗೂ ಸೇವಾ ಚಟುವಟಿಕೆಗಳಲ್ಲಿ ನಿರತರಾಗಿದ್ದ ಅವರು ತಮ್ಮ ಸಮುದಾಯ ಸಹಿತ ಎಲ್ಲರ ಅಭಿವೃದ್ಧಿಗೆ ಶ್ರಮಿಸಿದ್ದರು. ಭಗವಂತನು ಅವರಿಗೆ ಸದ್ಗತಿ ಕರುಣಿಸಿ ಕುಟುಂಬ ವರ್ಗಕ್ಕೆ ಅಗಲಿಕೆಯ ನೋವನ್ನು ಸಹಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದರು.

error: Content is protected !!