ಬೈಕಂಪಾಡಿ ಕೈಗಾರಿಕಾ ಪ್ರದೇಶಕ್ಕೆ 11 ಕೋಟಿ ವೆಚ್ಚದ ಕಾಂಕ್ರೀಟ್ ರಸ್ತೆ ಭಾಗ್ಯ- ಗುರುವಾರದಿಂದ ಸಂಚಾರ ಮಾರ್ಗ ಬದಲಾವಣೆ

ಸುರತ್ಕಲ್: ಬೈಕಂಪಾಡಿ ಕೈಗಾರಿಕಾ ಪ್ರದೇಶಕ್ಕೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಬದಿಯ ರಸ್ತೆಯ ಕಾಂಕ್ರೀಟ್ ಕಾಮಗಾರಿ ಹಾಗೂ ಟ್ರಕ್ ಯಾರ್ಡ್ ನಿರ್ಮಾಣಕ್ಕೆ ಮುಹೂರ್ತ ನಿಗದಿಯಾಗಿದೆ. ಸುಮಾರು 11 ಕೋಟಿ ರೂಪಾಯಿ ವೆಚ್ಚದ ಈ ಸುಸಜ್ಜಿತ ಕಾಮಗಾರಿಯು ಗುರುವಾರದಿಂದ ಅಧಿಕೃತವಾಗಿ ಪ್ರಾರಂಭವಾಗಲಿದೆ.

ಮಂಗಳೂರು ಉತ್ತರ ಶಾಸಕ ಡಾ. ವೈ. ಭರತ್ ಶೆಟ್ಟಿ ಅವರು ನವ ಮಂಗಳೂರು ಬಂದರು ಪ್ರಾಧಿಕಾರಕ್ಕೆ (NMPA) ವಿಶೇಷ ಮನವಿ ಸಲ್ಲಿಸಿದ ಹಿನ್ನೆಲೆಯಲ್ಲಿ, ಬಂದರು ಪ್ರಾಧಿಕಾರವು ಈ ಕಾಮಗಾರಿಗಾಗಿ 11 ಕೋಟಿ ರೂಪಾಯಿ ಅನುದಾನವನ್ನು ಬಿಡುಗಡೆ ಮಾಡಿದೆ. ಕೈಗಾರಿಕಾ ವಲಯದ ಪ್ರಮುಖ ರಸ್ತೆ ಇದಾಗಿರುವುದರಿಂದ ದೀರ್ಘಕಾಲದಿಂದ ಕಾಂಕ್ರೀಟ್ ರಸ್ತೆ ನಿರ್ಮಾಣಕ್ಕೆ ಒತ್ತಾಯ ಕೇಳಿಬರುತ್ತಿತ್ತು.

ಕಾಮಗಾರಿ ಹಿನ್ನೆಲೆಯಲ್ಲಿ ಸೋಮವಾರ ಶಾಸಕರ ನೇತೃತ್ವದಲ್ಲಿ ಎನ್.ಎಂ.ಪಿ.ಎ, ಕೆ.ಐ.ಎ.ಡಿ.ಬಿ (KIADB) ಮತ್ತು ಸಂಚಾರಿ ಪೊಲೀಸ್ ಅಧಿಕಾರಿಗಳ ಮಹತ್ವದ ಸಭೆ ನಡೆಯಿತು. ಈ ವೇಳೆ ಕಾಮಗಾರಿ ನಡೆಯುವ ಅವಧಿಯಲ್ಲಿ ಸಂಚಾರ ನಿಯಂತ್ರಣ ಮತ್ತು ಸಾರ್ವಜನಿಕರಿಗೆ ತೊಂದರೆಯಾಗದಂತೆ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಸುದೀರ್ಘ ಚರ್ಚೆ ನಡೆಸಲಾಯಿತು.

ನಿಮ್ಮ ಮನೆ/ಆಸ್ತಿ ಮಾರಾಟ ಮತ್ತು ಖರೀದಿಗೆ ಇಲ್ಲಿದೆ ಸುವರ್ಣ ಅವಕಾಶ! ಈಗಲೇ ಈ ಲಿಂಕ್ ಕ್ಲಿಕ್ ಮಾಡಿ ಗುಂಪಿಗೆ ಸೇರಿಕೊಳ್ಳಿ

ಸಂಚಾರ ಮಾರ್ಗ ಬದಲಾವಣೆ:
ಭಾರೀ ವಾಹನಗಳ ಸಂಚಾರ ದಟ್ಟಣೆ ಹೆಚ್ಚಿರುವ ಈ ಪ್ರದೇಶದಲ್ಲಿ ಕಾಮಗಾರಿ ಸುಗಮವಾಗಿ ನಡೆಯಲು ಅನುಕೂಲವಾಗುವಂತೆ ಸಂಬಂಧಿತ ರಸ್ತೆಯನ್ನು ತಾತ್ಕಾಲಿಕವಾಗಿ ಮುಚ್ಚಲು ನಿರ್ಧರಿಸಲಾಗಿದೆ. ಗುರುವಾರದಿಂದಲೇ ಪರ್ಯಾಯ ಸಂಚಾರ ವ್ಯವಸ್ಥೆಯನ್ನು ಕಲ್ಪಿಸಲಾಗುತ್ತಿದ್ದು, ಈ ಕುರಿತು ಸಂಚಾರಿ ಪೊಲೀಸರು ಅಧಿಕೃತ ಆದೇಶ ಹೊರಡಿಸಲಿದ್ದಾರೆ.

ನಿಮ್ಮ ಎಲ್ಲಾ ರೀತಿಯ ಡಾಕ್ಯುಮೆಂಟೇಶನ್ ಮತ್ತು ಲೀಗಲ್ ಸರ್ವಿಸ್‌ ಅಗತ್ಯತೆಗಾಗಿ ಈಗಲೇ ಈ ಲಿಂಕ್ ಅನ್ನು ಕ್ಲಿಕ್ ಮಾಡಿ ಗ್ರೂಪ್ ಸೇರಿಕೊಳ್ಳಿ.

ಎರಡು ತಿಂಗಳಲ್ಲಿ ಕಾಮಗಾರಿ ಪೂರ್ಣ:
ಬೈಕಂಪಾಡಿ ಕೈಗಾರಿಕಾ ಪ್ರದೇಶವು ಪ್ರಮುಖ ಉದ್ಯಮ ವಲಯವಾಗಿರುವುದರಿಂದ, ಈ ರಸ್ತೆ ನಿರ್ಮಾಣವು ಸ್ಥಳೀಯ ಉದ್ಯಮಿಗಳು ಮತ್ತು ಸವಾರರಿಗೆ ದೊಡ್ಡ ಮಟ್ಟದ ಅನುಕೂಲ ಕಲ್ಪಿಸಲಿದೆ. ಕಾಮಗಾರಿಯನ್ನು ವಿಳಂಬ ಮಾಡದೆ ಮುಂದಿನ ಎರಡು ತಿಂಗಳ ಒಳಗಾಗಿ ಪೂರ್ಣಗೊಳಿಸಬೇಕು ಎಂದು ಶಾಸಕ ಡಾ. ಭರತ್ ಶೆಟ್ಟಿ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಸಭೆಯಲ್ಲಿ ಬಂದರು ಪ್ರಾಧಿಕಾರ, ಸಂಚಾರಿ ಪೊಲೀಸ್ ಇಲಾಖೆ ಹಾಗೂ ಕೆ.ಐ.ಎ.ಡಿ.ಬಿ ಅಧಿಕಾರಿಗಳು ಉಪಸ್ಥಿತರಿದ್ದರು.

error: Content is protected !!