180 ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ; 350 ಕ್ಕೂ ಹೆಚ್ಚು ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್

ಮುಂಬೈ: ಮಹಾರಾಷ್ಟ್ರದ ಅಮರಾವತಿಯಲ್ಲಿ 180 ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ 350 ಕ್ಕೂ ಹೆಚ್ಚು ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿದ ಆರೋಪದಡಿ ಬಿಜೆಪಿ ಸಂಸದರೊಬ್ಬರ ದೂರಿನ ಮೇರೆಗೆ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಪರತ್ವಾಡ ನಗರದ ನಿವಾಸಿ ಮೊಹಮ್ಮದ್ ಅಯಾಜ್ ಅಲಿಯಾಸ್ ತನ್ವೀರ್ ಬಂಧಿತ ವ್ಯಕ್ತಿ.

ನಿಮ್ಮ ಎಲ್ಲಾ ರೀತಿಯ ಡಾಕ್ಯುಮೆಂಟೇಶನ್ ಮತ್ತು ಲೀಗಲ್ ಸರ್ವಿಸ್‌ ಅಗತ್ಯತೆಗಾಗಿ ಈಗಲೇ ಈ ಲಿಂಕ್ ಅನ್ನು ಕ್ಲಿಕ್ ಮಾಡಿ ಗ್ರೂಪ್ ಸೇರಿಕೊಳ್ಳಿ.

ಹುಡುಗಿಯರನ್ನು ಪ್ರೀತಿಯ ಬಲೆಗೆ ಬೀಳಿಸಿ, ಮುಂಬೈ ಮತ್ತು ಪುಣೆಗೆ ಕರೆದೊಯ್ದು ಅವರ ಅಶ್ಲೀಲ ವೀಡಿಯೊಗಳನ್ನು ಚಿತ್ರೀಕರಿಸಿ ಬ್ಲ್ಯಾಕ್‌ಮೇಲ್ ಮಾಡಲು ಮತ್ತು ವೇಶ್ಯಾವಾಟಿಕೆಗೆ ಒತ್ತಾಯಿಸಲು ಈ ವಿಡಿಯೋಗಳನ್ನು ಬಳಸಲಾಗುತ್ತಿತ್ತು ಎಂದು ಆರೋಪಿಸಲಾಗಿದೆ. ಕೆಲವೊಂದನ್ನು ಆನ್‌ಲೈನ್‌ನಲ್ಲಿಯೂ ವ್ಯಾಪಕವಾಗಿ ಹಂಚಿಕೊಳ್ಳಲಾಗಿದೆ ಎನ್ನಲಾಗಿದೆ.

ರಾಜ್ಯಸಭಾ ಸಂಸದ ಅನಿಲ್ ಬೋಂಡೆ ಅವರು ಪೊಲೀಸ್ ವರಿಷ್ಠಾಧಿಕಾರಿ (ಗ್ರಾಮೀಣ) ವಿಶಾಲ್ ಆನಂದ್ ಅವರಿಗೆ ಸಲ್ಲಿಸಿದ ಜ್ಞಾಪಕ ಪತ್ರದ ಪ್ರಕಾರ, ಅಪ್ರಾಪ್ತ ವಯಸ್ಕರನ್ನು ವಾಟ್ಸಾಪ್ ಮತ್ತು ಸ್ನ್ಯಾಪ್‌ಚಾಟ್ ಗ್ರೂಪ್‌ಗಳ ಮೂಲಕ ವ್ಯವಸ್ಥಿತವಾಗಿ ಟಾರ್ಗೆಟ್‌ ಮಾಡಲಾಗುತ್ತಿತ್ತು. ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸದಿದ್ದರೆ ಬುಧವಾರ ಎಸ್‌ಪಿ ಕಚೇರಿಯ ಮುಂದೆ ಪ್ರತಿಭಟನೆ ನಡೆಸುವುದಾಗಿ ಬೋಂಡೆ ಎಚ್ಚರಿಸಿದ್ದಾರೆ. ಮುಸ್ಲಿಂ ಸಮುದಾಯದ ಕೆಲವು ಸದಸ್ಯರು ಸಹ ಪೊಲೀಸ್ ಠಾಣೆಗೆ ಭೇಟಿ ನೀಡಿ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ಸಮುದಾಯದ ಖ್ಯಾತಿಗೆ ಕಳಂಕ ಬರದಂತೆ ತಡೆಯುವ ಅಗತ್ಯವನ್ನು ಒತ್ತಿ ಹೇಳಿದ್ದಾರೆ.

ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ ಅಂತಹ ಹಲವಾರು ವಿಡಿಯೋಗಳನ್ನು ಇನ್‌ಸ್ಟಾಗ್ರಾಮ್ ಖಾತೆಯಿಂದ ಅಳಿಸಲಾಗಿದೆ. ಪ್ರಕರಣದಲ್ಲಿ ತ್ವರಿತವಾಗಿ ಕಾರ್ಯನಿರ್ವಹಿಸಿದ ಪೊಲೀಸರು ಅಯಾಜ್‌ನನ್ನು ಬಂಧಿಸಿ ಇಂದು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ. ಆತನನ್ನು ಏಳು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಆತನ ಮೊಬೈಲ್ ಫೋನ್ ಅನ್ನು ಸಹ ಪೊಲೀಸರು ವಶಪಡಿಸಿಕೊಂಡಿದ್ದಾರೆ.

error: Content is protected !!