ಚಾಲಕನ ನಿಯಂತ್ರಣ ತಪ್ಪಿ ಕಾರು ರಸ್ತೆ ಬದಿಯ ತೋಡಿಗೆ ಪಲ್ಟಿ!!

ವಿಟ್ಲ: ಚಾಲಕನ ನಿಯಂತ್ರಣ ತಪ್ಪಿದ ಮಾರುತಿ ಕಾರು ರಸ್ತೆ ಬದಿಯ ತೋಡಿಗೆ ಪಲ್ಟಿಯಾದ ಘಟನೆ ವಿಟ್ಲ-ಸಾಲೆತ್ತೂರು ರಸ್ತೆಯ ಕೊಡಂಗಾಯಿ ಸೇತುವೆ ಬಳಿ ಇಂದು(ಎ.15) ನಡೆದಿದೆ.

ಚಾಲಕ ಮತ್ತು ಮಕ್ಕಳಿಬ್ಬರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಪಘಾತಕ್ಕೀಡಾದ ಮಾರುತಿ ಕಾರು ಸ್ಥಳೀಯ ನಿವಾಸಿಗಳಿದ್ದೇ ಎನ್ನಲಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.

error: Content is protected !!