ಯಕ್ಷಧ್ರುವ ಪಟ್ಲ ಫೌಂಡೇಶನ್ ಸುರತ್ಕಲ್ ಘಟಕದ ವಾರ್ಷಿಕೋತ್ಸವ, ಆಮಂತ್ರಣ ಪತ್ರಿಕೆ ಬಿಡುಗಡೆ

ಸುರತ್ಕಲ್ : ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ( ರಿ) ಮಂಗಳೂರು ಸುರತ್ಕಲ್ ಘಟಕದ 6 ನೇ ವರ್ಷದ ಅಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭವು ಇಡ್ಯಾ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಜರುಗಿತು.

ಅಮಂತ್ರಣ ಪತ್ರಿಕೆಯನ್ನು ಶಕುಂತಲಾ ರಮಾನಂದ ಭಟ್ ಇಡ್ಯಾ ಬಿಡುಗಡೆಗೊಳಿಸಿದರು.

ವೇದಿಕೆಯಲ್ಲಿ ಪಟ್ಲ ಫೌಂಡೇಶನ್ ಸುರತ್ಕಲ್ ಘಟಕದ ಗೌರವಾಧ್ಯಕ್ಷರಾದ ಸುಧಾಕರ ಪೂಂಜ, ಪಟ್ಲ ಫೌಂಡೇಶನ್ ಕೇಂದ್ರಿಯ ಘಟಕದ ಸಂಘಟನಾ ಕಾರ್ಯದರ್ಶಿ ಪ್ರದೀಪ್ ಆಳ್ವ ಕದ್ರಿ, ಜಗನ್ನಾಥ ಶೆಟ್ಟಿ ಬಾಳ, ಸಮಿತಿಯ ಉಪಾಧ್ಯಕ್ಷೆ ಸಹನಾ ರಾಜೇಶ್ ರೈ, ಉಪಾಧ್ಯಕ್ಷ ರಮೇಶ್ ಭಟ್, ಸಂಚಾಲಕ ನಾಗರಾಜ್ ಕಡಂಬೋಡಿ, ಮುಂತಾದವರು ಉಪಸ್ಥಿತರಿದ್ದರು. ಪಟ್ಲ ಫೌಂಡೇಶನ್ ಸುರತ್ಕಲ್ ಘಟಕದ ಅಧ್ಯಕ್ಷರಾದ ಲೀಲಾಧರ ಶೆಟ್ಟಿ ಕಟ್ಲ‌ ಸ್ವಾಗತಿಸಿ, ಕಾರ್ಯದರ್ಶಿ ಬಾಳ ಗಂಗಾಧರ ಪೂಜಾರಿ ಚೇಳೈರು ವಂದಿಸಿದರು. ಸವಿತಾ ಬಿ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

error: Content is protected !!