ನಾಯಿ ಅಡ್ಡ ಬಂದು ರಿಕ್ಷಾ ಪಲ್ಟಿ; ಚಾಲಕ ಸಾ*ವು

ಬೆಳ್ತಂಗಡಿ: ನಾಯಿ ಅಡ್ಡ ಬಂದು ಚಲಿಸುತ್ತಿದ್ದ ಆಟೋ ಪಲ್ಟಿಯಾಗಿ ಚಾಲಕ ಆಸ್ಪತ್ರೆಗೆ ಸಾಗಿಸುವ ವೇಳೆ ಸಾವನ್ನಪ್ಪಿದ ಘಟನೆ ಇಂದು(ಎ.16) ಅಳದಂಗಡಿಯಲ್ಲಿ ನಡೆದಿದೆ.

ನಾವರ ಗ್ರಾಮದ ಹಾರಡ್ಡೆ ನಿವಾಸಿ ದೇವಪ್ಪ/ಸುಧಾಕರ(37) ಮೃತ ಆಟೋ ಚಾಲಕ.

ಅಳದಂಗಡಿ ಸತ್ಯದೇವತೆ ದೇವಸ್ಥಾನದ ಬಳಿ ಇಂದು ಬೆಳಗ್ಗೆ ಗುರುವಾಯನಕೆರೆ ಕಡೆಯಿಂದ ಅಳದಂಗಡಿ ಕಡೆ ಬಾಡಿಗೆ ಮಾಡಿ ವಾಪಸ್ ಹೋಗುವಾಗ ರಸ್ತೆಯಲ್ಲಿ ನಾಯಿ ಅಡ್ಡಬಂದು ಆಟೋ ಪಲ್ಟಿಯಾಗಿ ಚಾಲಕ ದೇವಪ್ಪ/ಸುಧಾಕರ ಗಂಭೀರ ಗಾಯಗೊಂಡಿದ್ದರು. ಅವರನ್ನು ಆಸ್ಪತ್ರೆಗೆ ಸಾಗಿಸುವಾಗ ದಾರಿ ಮಧ್ಯೆ ಸಾವನ್ನಪ್ಪಿದ್ದಾರೆ.

ಬೆಳ್ತಂಗಡಿ ತಾಲೂಕು ಸರಕಾರಿ ಆಸ್ಪತ್ರೆಗೆ ಮೃತದೇಹವನ್ನು ಸಾಗಿಸಲಾಗಿದ್ದು, ಈ ಬಗ್ಗೆ ವೇಣೂರು ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

error: Content is protected !!