
ವಿಟ್ಲ: ಗೂಡ್ಸ್ ರಿಕ್ಷಾ ಹಾಗೂ ಬೈಕ್ ನಡುವೆ ನಡೆದ ಅಪಘಾತದಲ್ಲಿ, ಬೈಕ್ ನಲ್ಲಿ ಚಲಿಸುತ್ತಿದ್ದ ಸಹಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಸವಾರ ಅಪಾಯದಿಂದ ಪಾರಾಗಿರುವ ಘಟನೆ ಕುಕ್ಕಾಜೆ ಎಂಬಲ್ಲಿ ನಡೆದಿದೆ.

ಕುಕ್ಕಾಜೆಯ ಪಂಜಾಜೆ ನಿವಾಸಿ ಮನೀಶ್(23) ಮೃತ ಯುವಕ.
ಮನೀಶ್ ಮೆಲ್ಕಾರ್ ಕಡೆಯಿಂದ ಸ್ನೇಹಿತ ಉದಯ ಎಂಬವರ ಜೊತೆ ಕುಕ್ಕಾಜೆ ಮನೆಯ ಕಡೆ ಸಂಚರಿಸುತ್ತಿದ್ದ ವೇಳೆ ಅಪಘಾತ ಸಂಭವಿಸಿದ ಪರಿಣಾಮ ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಸವಾರ ಉದಯ ಅವರು ಅಲ್ಪಸ್ವಲ್ಪ ಗಾಯಗೊಂಡಿದದ್ದು, ಅಪಾಯದಿಂದ ಪಾರಾಗಿದ್ದಾರೆ.

ಬಂಟ್ವಾಳ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನಾ ಸ್ಥಳಕ್ಕೆ ಟ್ರಾಫಿಕ್ ಎಸ್.ಐ.ಆದರ್ಶ್ ಭೇಟಿ ನೀಡಿದ್ದಾರೆ.