ಯೋಗೇಶ್ ಗೌಡ ಹತ್ಯೆ ಪ್ರಕರಣ: ಶಿಕ್ಷೆ ಪ್ರಮಾಣ ನಾಳೆಗೆ ಮುಂದೂಡಿಕೆ

ಬೆಂಗಳೂರು: ಬಿಜೆಪಿ ಮುಖಂಡ ಯೋಗೇಶ್‌ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬುಧವಾರ(ಏ.15) ಜನಪ್ರತಿನಿಧಿಗಳ ವಿಶೇಷ ಕೋರ್ಟ್ 17 ಜನರನ್ನು ಅಪರಾಧಿ ಎಂದು ಕೋರ್ಟ್​​​ ಘೋಷಣೆ ಮಾಡಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು(ಏ.16) ಶಿಕ್ಷೆ ಪ್ರಮಾಣ ನಿರ್ಧಾರವಾಗಬೇಕಿತ್ತು, ಆದರೆ ಇದೀಗ ಶಿಕ್ಷೆ ಪ್ರಮಾಣವನ್ನು ನಾಳೆ (ಏ.17) ತಿಳಿಸಲಾಗುವುದು ಎಂದು ಕೋರ್ಟ್​​ ಹೇಳಿದೆ.

ಇಂದು ನ್ಯಾಯಾಲಯದಲ್ಲಿ ಶಿಕ್ಷೆಯ ಪ್ರಮಾಣದ ಬಗ್ಗೆ ವಾದ-ಪ್ರತಿವಾದ ನಡೆದಿದ್ದು, ಈ ವೇಳೆ ಪ್ರತಿಯೊಬ್ಬ ಅಪರಾಧಿಯೂ ತಮಗೆ ಕಡಿಮೆ ಶಿಕ್ಷೆ ನೀಡುವಂತೆ ನ್ಯಾಯಾಧೀಶರ ಮುಂದೆ ಕಣ್ಣೀರಿಟ್ಟಿದ್ದಾರೆ. “ನಾನು ಕಳೆದ 27 ವರ್ಷಗಳಿಂದ ರಾಜಕೀಯದಲ್ಲಿದ್ದೇನೆ, ಯಾರಿಗೂ ತೊಂದರೆ ಕೊಟ್ಟಿಲ್ಲ. ಮದುವೆ ವಯಸ್ಸಿನ ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ಕೃಷಿಕನಾದ ನಾನು ಸಾವಿರಾರು ಹಸುಗಳನ್ನು ಸಾಕುತ್ತಿದ್ದೇನೆ. ರಾಜಕೀಯ ಕಾರಣಕ್ಕೆ ನನ್ನ ಮೇಲೆ ಕೇಸ್ ಹಾಕಲಾಗಿದೆ” ಎಂದು ವಿನಯ್ ಕುಲಕರ್ಣಿ ಕೋರ್ಟ್‌ ಮುಂದೆ ಹೇಳಿದ್ದಾರೆ.

error: Content is protected !!