
ಕಾಪು: ಮಂಗಳೂರಿನಿಂದ ಉಡುಪಿ ಕಡೆಗೆ ಸಂಚರಿಸುತ್ತಿದ್ದ ಕಾರು ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಓರ್ವ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಪಾಂಗಳ ಕಟ್ಟಿಕೆರೆ ಬಳಿ ಗುರುವಾರ(ಏ.16) ಮಧ್ಯರಾತ್ರಿ ನಡೆದಿದೆ.


ಉಡುಪಿ ಮೂಲದ ಕಾರಿನಲ್ಲಿದ್ದ ಶ್ರೇಯಸ್ ಆಚಾರ್ಯ ಮೃತ ಯುವಕ. ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.

ಇಬ್ಬರಿಗೆ ಗಂಭೀರ ಗಾಯವಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾಪು ಪೋಲಿಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.