ರಾಜ್ಯದ ಹಲವೆಡೆ ಏ.21ರವರೆಗೆ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಬಿಸಿಲಿನ ಮಧ್ಯೆ ಏ.21ರವರೆಗೆ ಹಲವೆಡೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಹವಾಮಾನ ಇಲಾಖೆ ಪ್ರಕಾರ, ಏ.20ರವರೆಗೆ ಉತ್ತರ ಒಳನಾಡಿನಲ್ಲಿ ಮಳೆಯಾಗುವ ಸಾಧ್ಯತೆಯಿದ್ದು, ಮೇ.1ರವರೆಗೆ ದಕ್ಷಿಣ ಒಳನಾಡಿನಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಜೊತೆಗೆ ಹಲವೆಡೆ ಆಲಿಕಲ್ಲು ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.

ಇದರ ನಡುವೆ ರಾಜ್ಯದಲ್ಲಿ 1 ರಿಂದ 3 ಡಿಗ್ರಿ ಸೆಲ್ಸಿಯಸ್‌ವರೆಗೆ ಸಾಮಾನ್ಯಕ್ಕಿಂತ ತಾಪಮಾನದಲ್ಲಿ ಏರಿಕೆ ಕಂಡುಬರುತ್ತಿದೆ. ಬೆಂಗಳೂರಿನಲ್ಲಿ 36 ರಿಂದ 37 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗುತ್ತಿದೆ.

error: Content is protected !!