ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ!!

ಬಂಟ್ವಾಳ: ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ವಿಟ್ಲ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಬಂಟ್ವಾಳ ಪೆರುವಾಯಿ ನಿವಾಸಿ ಅಬ್ಬಾಸ್ ಬಂಧಿತ ಆರೋಪಿ.

ಅಬ್ಬಾಸ್ ವಿದೇಶದಿಂದ ಹಿಂತಿರುಗುವಾಗ ಇಮಿಗ್ರೇಶನ್ ವಿಭಾಗದ ಸಹಕಾರದಿಂದ, ಮಂಗಳೂರು ವಿಮಾನ ನಿಲ್ದಾಣದಲ್ಲಿ ವಿಟ್ಲ ಪೊಲೀಸ್ ಠಾಣಾ ಸಿಬ್ಬಂದಿಗಳಾದ ಮೋಹನ ಮತ್ತು ವೆಂಕಪ್ಪ ವಶಕ್ಕೆ ಪಡೆದು ದಸ್ತಗಿರಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

error: Content is protected !!