ಭೀಕರ ಬಸ್ ಅಪಘಾತ: 15 ಮಂದಿ ಸಾ*ವು, ಹಲವರ ಸ್ಥಿತಿ ಗಂಭೀರ

ಉಧಂಪುರ: ರಾಮನಗರದಿಂದ ಉಧಂಪುರಕ್ಕೆ ತೆರಳುತ್ತಿದ್ದ ಬಸ್, ತಿರುವೊಂದರಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಬೆಟ್ಟದ ಕೆಳಗೆ ಉರುಳಿ ಬಿದ್ದ ಘಟನೆ ಜಮ್ಮು ಮತ್ತು ಕಾಶ್ಮೀರದ ಉಧಂಪುರ ಜಿಲ್ಲೆಯಲ್ಲಿ ಸೋಮವಾರ(ಏ.20) ಬೆಳಿಗ್ಗೆ ಸುಮಾರು 10 ಗಂಟೆಯ ಸುಮಾರಿಗೆ ನಡೆದಿದ್ದು, ಅಪಘಾತದಲ್ಲಿ ಕನಿಷ್ಠ 15 ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಅಪಘಾತ ಸಂಭವಿಸಿದ ಕೂಡಲೇ ಸ್ಥಳೀಯರು, ಪೋಲೀಸರು ಮತ್ತು ಸೇನಾ ಪಡೆಗಳು ಜಂಟಿಯಾಗಿ ರಕ್ಷಣಾ ಕಾರ್ಯಾಚರಣೆಯನ್ನು ಕೈಗೊಂಡಿದ್ದು, ಗಾಯಾಳುಗಳ ಪೈಕಿ ಹಲವರ ಸ್ಥಿತಿ ಚಿಂತಾಜನಕವಾಗಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಂಭವವಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಅವರು ಘಟನೆಯ ಬಗ್ಗೆ ತೀವ್ರ ಶೋಕ ವ್ಯಕ್ತಪಡಿಸಿದ್ದು, ಗಂಭೀರವಾಗಿ ಗಾಯಗೊಂಡವರನ್ನು ಏರ್‌ಲಿಫ್ಟ್ ಮಾಡಲು ವ್ಯವಸ್ಥೆ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

error: Content is protected !!