ಛತ್ತೀಸ್‌ಗಢ: ನೆಲದಿಂದ ಕೇವಲ 30 ಅಡಿ ಎತ್ತರದಲ್ಲಿ ಹಾರುತ್ತಿದ್ದಂತಹ ಖಾಸಗಿ ವಿಮಾನವೊಂದು ಮರಕ್ಕೆ ಡಿಕ್ಕಿಯಾಗಿ ಪತನಗೊಂಡ ಘಟನೆ ಛತ್ತೀಸ್‌ಗಢದ ಜಶ್‌ಪುರ ಜಿಲ್ಲೆಯ ರತನ್‌ಪಹ್ಲಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ವಿಮಾನವು ನೆಲದಿಂದ ಸುಮಾರು 30 ಅಡಿ ಎತ್ತರದಲ್ಲಿ ಹಾರುತ್ತ, ಮರಕ್ಕೆ ಡಿಕ್ಕಿಯಾಗಿದ್ದು, ವಿಮಾನ ಪತನಗೊಂಡ ಸ್ಥಳದಲ್ಲಿ ದಟ್ಟ ಹೊಗೆ ಆವರಿಸಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

ಅಪಘಾತಕ್ಕೂ ಕೆಲವೇ ಕ್ಷಣಗಳ ಮುನ್ನ ಭಾರೀ ಕೆಳಮಟ್ಟದಲ್ಲಿ ಸಣ್ಣ ಸಿಂಗಲ್-ಎಂಜಿನ್ ಪ್ರೊಪೆಲ್ಲರ್ ವಿಮಾನ ಕೆಳಕ್ಕೆ ಹಾರುತ್ತಿರುವ ದೃಶ್ಯಗಳು ಕ್ಯಾಮೆರಾದಲ್ಲಿ ಸೆರೆಯಾಗಿದೆ. ರಕ್ಷಣಾ ತಂಡ ಸ್ಥಳಕ್ಕೆ ಧಾವಿಸಿ, ಪರಿಶೀಲನೆ ನಡೆಸುತ್ತಿದೆ.

ಅಪಘಾತವನ್ನು ಇನ್ನೂ ಅಧಿಕೃತವಾಗಿ ದೃಢೀಕರಿಸಲಾಗಿಲ್ಲ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.