ಬಿಜೆಪಿ ಮಂಗಳೂರು ಉತ್ತರ ಮಂಡಲದ ‘ಪ್ರಶಿಕ್ಷಣ ಮಹಾ ಅಭಿಯಾನ’ಕ್ಕೆ ಒಡ್ಡೂರು ಫಾರ್ಮ್ಸ್‌ನಲ್ಲಿ ಚಾಲನೆ

ಮಂಗಳೂರು: ಭಾರತೀಯ ಜನತಾ ಪಾರ್ಟಿ ಮಂಗಳೂರು ಉತ್ತರ ಮಂಡಲದ ವತಿಯಿಂದ ಹಮ್ಮಿಕೊಳ್ಳಲಾದ 2026ರ ‘ಪಂಡಿತ್ ದೀನ ದಯಾಳ್ ಉಪಾಧ್ಯಾಯ ಪ್ರಶಿಕ್ಷಣ ಮಹಾ ಅಭಿಯಾನ’ಕ್ಕೆ ಗಂಜಿಮಠ ಸಮೀಪದ ಒಡ್ಡೂರು ಫಾರ್ಮ್ಸ್‌ನಲ್ಲಿ ಆದಿತ್ಯವಾರ ಅದ್ಧೂರಿ ಚಾಲನೆ ನೀಡಲಾಯಿತು.

ಉಡುಪಿ-ಚಿಕ್ಕಮಗಳೂರು ಲೋಕಸಭಾ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಮತ್ತು ದಕ್ಷಿಣ ಕನ್ನಡ ಲೋಕಸಭಾ ಸದಸ್ಯ ಕ್ಯಾ| ಬ್ರಿಜೇಶ್ ಚೌಟ ಅವರು ಜಂಟಿಯಾಗಿ ದೀಪ ಬೆಳಗಿಸಿ, ಭಾರತ ಮಾತೆ ಹಾಗೂ ಪಕ್ಷದ ಸಂಸ್ಥಾಪಕರ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಅಭಿಯಾನವನ್ನು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಮಂಗಳೂರು ನಗರ ಉತ್ತರ ಶಾಸಕ ಡಾ. ಭರತ್ ಶೆಟ್ಟಿ ವೈ., ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್, ಮತ್ತು ಶಿವಮೊಗ್ಗ ಶಾಸಕ ಚೆನ್ನಬಸಪ್ಪ ಅವರು ಉಪಸ್ಥಿತರಿದ್ದು ಮಾರ್ಗದರ್ಶನ ನೀಡಿದರು.

ಅಲ್ಲದೆ, ಪಕ್ಷದ ರಾಜ್ಯ ವಕ್ತಾರ ಹರಿಪ್ರಕಾಶ್ ಕೋಣಿಮನಿ, ಪ್ರಶಿಕ್ಷಣ ವರ್ಗದ ರಾಜ್ಯ ಸಹ ಸಂಚಾಲಕ ವಿಕಾಸ್ ಪುತ್ತೂರು, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರುಗಳಾದ ಶಾಂತಿಪ್ರಸಾದ್ ಹೆಗ್ಡೆ, ತಿಲಕ್ ರಾಜ್ ಕೃಷ್ಣಾಪುರ, ಪೂಜಾ ಪೈ, ಕವಿತಾ ಸನಿಲ್, ಪ್ರಧಾನ ಕಾರ್ಯದರ್ಶಿಗಳಾದ ಯುತೀಶ್ ಆಳ್ವ, ಪ್ರೇಮಾನಂದ ಶೆಟ್ಟಿ ಭಾಗವಹಿಸಿದ್ದರು.

ರಾಜ್ಯ ಮಹಿಳಾ ಮೋರ್ಚಾ ಕಾರ್ಯದರ್ಶಿ ಶ್ವೇತಾ ಪೂಜಾರಿ, ಮನ್ ಕೀ ಬಾತ್ ಜಿಲ್ಲಾ ಪ್ರಮುಖ್ ಸೀತಾರಾಮ ನಾಯ್ಕ್, ಮಂಡಲ ಕಾರ್ಯದರ್ಶಿ ಸಂದೀಪ್ ಪಚ್ಚನಾಡಿ, ಕಾರ್ಪೂರೇಟರ್‌ಗಳಾದ ಸಂಗೀತ ನಾಯಕ್, ರಣದೀಪ್ ಕಾಂಚನ್ ಸೇರಿದಂತೆ ಪಕ್ಷದ ಪ್ರಮುಖ ಕಾರ್ಯಕರ್ತರು ಮತ್ತು ಪದಾಧಿಕಾರಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಪಕ್ಷದ ಸಿದ್ಧಾಂತ, ಸಂಘಟನಾತ್ಮಕ ಕೌಶಲ ಮತ್ತು ಕಾರ್ಯಕರ್ತರ ಬಲವರ್ಧನೆಯ ಉದ್ದೇಶದಿಂದ ಈ ಪ್ರಶಿಕ್ಷಣ ವರ್ಗವನ್ನು ಆಯೋಜಿಸಲಾಗಿದ್ದು, ಮುಂಬರುವ ದಿನಗಳಲ್ಲಿ ಪಕ್ಷದ ಕಾರ್ಯಚಟುವಟಿಕೆಗಳಿಗೆ ಇದು ಹೊಸ ಚೈತನ್ಯ ನೀಡಲಿದೆ ಎಂದು ಈ ಸಂದರ್ಭದಲ್ಲಿ ಅಭಿಪ್ರಾಯಪಡಲಾಯಿತು.

error: Content is protected !!