
ಮಂಗಳೂರು: ಕಟೀಲು ದುರ್ಗಾಪರಮೇಶ್ವರಿ ಅಮ್ಮನವರ ವಾರ್ಷಿಕ ಜಾತ್ರೋತ್ಸವದ ಪ್ರಯುಕ್ತ ಇಂದು(ಏ.21) ಗೋಲ್ಡನ್ ಟ್ರಾವೆಲ್ಸ್ ಸಂಸ್ಥೆಯ ಕಟೀಲು ಮಾರ್ಗವಾಗಿ ಬೆಳಿಗ್ಗೆಯಿಂದ ಸಂಜೆಯವರೆಗೆ ಚಲಿಸುವ ಎಲ್ಲಾ ಎಂಟು ಸರ್ವಿಸ್ ಬಸ್‌ಗಳು ಪ್ರಯಾಣಿಕರಿಗೆ ಉಚಿತ ಪ್ರಯಾಣದ ಸೇವೆಯನ್ನು ನೀಡಲಿದೆ.

ಪ್ರತೀ ವರ್ಷವೂ ಕಟೀಲು ದುರ್ಗಾಪರಮೇಶ್ವರಿ ಅಮ್ಮನವರ ಜಾತ್ರೋತ್ಸವಕ್ಕೆ ಒಂದು ದಿನದ ಉಚಿತ ಪ್ರಯಾಣದ ಸೇವೆಯನ್ನು ಪ್ರಯಾಣಿಕರಿಗೆ ನೀಡುತ್ತಿದ್ದು, ಈ ಬಾರಿಯೂ ಅದನ್ನು ಮುಂದುವರಿಸಲಾಗಿದೆ. ಆದುದರಿಂದ ಎಲ್ಲಾ ಪ್ರಯಾಣಿಕರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ಸಂಸ್ಥೆಯ ಮಾಲಿಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
