ಎ.24: ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ವಿಶೇಷ ಸಚಿವ ಸಂಪುಟ ಸಭೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಏಪ್ರಿಲ್ 24ರ ಮಧ್ಯಾಹ್ನ 2 ಗಂಟೆಗೆ ಸಚಿವ ಸಂಪುಟದ ವಿಶೇಷ ಸಭೆಯನ್ನು ವಿಧಾನಸೌಧದ ಸಚಿವ ಸಂಪುಟ ಸಭಾ ಮಂದಿರದಲ್ಲಿ ನಡೆಯಲಿದೆ.

ಒಳ ಮೀಸಲಾತಿ ವಿಚಾರವಾಗಿ ಈ ಸಂಪುಟ ಸಭೆ ಸಾಕಷ್ಟು ಮಹತ್ವ ಪಡೆದುಕೊಂಡಿದೆ. ಉಪ ಚುನಾವಣೆಯ ಹಿನ್ನೆಲೆಯಲ್ಲಿ ಒಳ ಮೀಸಲಾತಿಯ ಕುರಿತಾದ ನಿರ್ಧಾರ ಮುಂದೂಡಲಾಗಿತ್ತು. ಆದರೆ, ಏಪ್ರಿಲ್ 24 ರಂದು ಈ ನಿಟ್ಟಿನಲ್ಲಿ ಮಹತ್ವದ ತೀರ್ಮಾನ ಆಗುವ ಸಾಧ್ಯತೆ ಇದೆ.

error: Content is protected !!