
ಕಾರವಾರ: ಚಾಲಕನ ಅತೀ ವೇಗದ ಚಾಲನೆಯಿಂದ ಕಾರು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಓರ್ವ ಗಂಭೀರ ಗಾಯಗೊಂಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ತಾಲೂಕಿನ ಕರ್ಕಾ ಕ್ರಾಸ್‌ನ ಅಜಗಾಂವ ಬಳಿ ನಡೆದಿದೆ.

ಧಾರವಾಡದ ಫಾರೂಖ್ ಸಾಬ್ ಮತ್ತು ಹಳಿಯಾಳದ ಮುದಸ್ಸಿರ್ ಇಸ್ಮಾಯಿಲ್ ಮುಲ್ಲಾ ಮೃತ ದುರ್ದೈವಿಗಳು.

ದಾಂಡೇಲಿಯಿಂದ ಹಳಿಯಾಳಕ್ಕೆ ಹೋಗುವಾಗ ಈ ಘಟನೆ ನಡೆದಿದ್ದು, ಡಿಕ್ಕಿಯ ರಭಸಕ್ಕೆ ಕಾರು ಎರಡು ಮರಗಳ ನಡುವೆ ಸಿಲುಕಿಕೊಂಡಿದೆ. ಸದ್ಯ ಮೃತದೇಹಗಳನ್ನು ಹಳಿಯಾಳ ತಾಲೂಕು ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಘಟನೆ ಸಂಬಂಧ ದಾಂಡೇಲಿ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.