ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ; 40ಕ್ಕೂ ಹೆಚ್ಚು ಮಂದಿ ಅಪಾಯದಿಂದ ಪಾರು

ತುಮಕೂರು: ತಿಪಟೂರು ಡಿಪೋಗೆ ಸೇರಿದ ಕೆಎಸ್‌ಆರ್‌ಟಿಸಿ ಬಸ್ ಹೊಸದುರ್ಗದಿಂದ ಬೆಂಗಳೂರಿನ ಕಡೆಗೆ ತೆರಳುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ, ರಸ್ತೆ ಬದಿಯ ಡಿವೈಡರ್‌ಗೆ ಬಲವಾಗಿ ಡಿಕ್ಕಿ ಹೊಡೆದು ಪಲ್ಟಿಯಾದ ಭೀಕರ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಕಳ್ಳಿಪಾಳ್ಯದ ಬಳಿ ರಾಷ್ಟ್ರೀಯ ಹೆದ್ದಾರಿ 206ರಲ್ಲಿ ನಡೆದಿದೆ.

ಬಸ್‌ನಲ್ಲಿದ್ದ 40ಕ್ಕೂ ಹೆಚ್ಚು ಪ್ರಯಾಣಿಕರು ಪ್ರಾಣಪಾಯದಿಂದ ಪಾರಾಗಿದ್ದಾರೆ. ಡಿಕ್ಕಿಯ ರಭಸಕ್ಕೆ ಬಸ್ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ.

ಅಪಘಾತದಲ್ಲಿ ಐದಾರು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದು, ತಕ್ಷಣವೇ ಅವರನ್ನು ಚಿಕಿತ್ಸೆಗಾಗಿ ತುಮಕೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದ 40ಕ್ಕೂ ಹೆಚ್ಚು ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನಾ ಸ್ಥಳಕ್ಕೆ ಗುಬ್ಬಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಗುಬ್ಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!