ಏ.22: ಮಂಗಳೂರಿನಲ್ಲಿ ಬೃಹತ್ ಉದ್ಯೋಗ ಮೇಳ!

ಮಂಗಳೂರು: ಉದ್ಯೋಗಾಕಾಂಕ್ಷಿಗಳಿಗೆ ಕರ್ನಾಟಕ ಸರ್ಕಾರವು ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದ್ದು, ಮಂಗಳೂರಿನಲ್ಲಿ ಏಪ್ರಿಲ್ 22 ರಂದು ನೇರ ಸಂದರ್ಶನ ನಡೆಯಲಿದೆ. ಪ್ರತಿಷ್ಠಿತ ಖಾಸಗಿ ಸಂಸ್ಥೆಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ. ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ನೇತೃತ್ವದಲ್ಲಿ ಈ ಪ್ರಕ್ರಿಯೆ ನಡೆಯಲಿದೆ.

ಈ ಬಾರಿಯ ಉದ್ಯೋಗ ಮೇಳದಲ್ಲಿ ಪ್ರಮುಖವಾಗಿ ಎರಡು ಸಂಸ್ಥೆಗಳು ಭಾಗವಹಿಸುತ್ತಿವೆ. ಮೊದಲನೆಯದಾಗಿ ಪ್ರಸಿದ್ಧ ರಿಟೇಲ್ ಸಂಸ್ಥೆಯಾದ ‘ಮೈ ಜಿ ಫ್ಯೂಚರ್’ ಕಂಪನಿಯು ಮ್ಯಾನೇಜ್‌ಮೆಂಟ್ ಮತ್ತು ಸೇಲ್ಸ್ ವಿಭಾಗದಲ್ಲಿ ಹಲವು ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಎರಡನೆಯದಾಗಿ, ಸಾಮಾಜಿಕ ಸೇವೆಯಲ್ಲಿ ತೊಡಗಿರುವ ‘ಅಕ್ಷಯಪಾತ್ರ ಫೌಂಡೇಶನ್’ ಸಂಸ್ಥೆಯು ತಾಂತ್ರಿಕ ಮತ್ತು ಅಡುಗೆ ವಿಭಾಗದ ಸಿಬ್ಬಂದಿಗಳ ಹುಡುಕಾಟದಲ್ಲಿದೆ.

ಅರ್ಹ ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆಗೆ ಅನುಗುಣವಾಗಿ ಹುದ್ದೆಗಳನ್ನು ಆಯ್ಕೆ ಮಾಡಿಕೊಳ್ಳಬಹುದು. ಮೈ ಜಿ ಫ್ಯೂಚರ್ ಸಂಸ್ಥೆಯಲ್ಲಿ ಬ್ಯುಸಿನೆಸ್ ಮ್ಯಾನೇಜರ್, ಬಿಲ್ಲಿಂಗ್ ಎಕ್ಸಿಕ್ಯೂಟಿವ್, ಶೋ ರೂಮ್ ಸೇಲ್ಸ್ ಮತ್ತು ಕಸ್ಟಮರ್ ಸರ್ವಿಸ್ ವಿಭಾಗಗಳಲ್ಲಿ ಕೆಲಸ ಮಾಡಲು ಪದವಿ ಅಥವಾ ಪಿಯುಸಿ ಮುಗಿಸಿದವರಿಗೆ ಆದ್ಯತೆ ನೀಡಲಾಗುತ್ತದೆ. ಇನ್ನು ಅಕ್ಷಯಪಾತ್ರ ಫೌಂಡೇಶನ್‌ನಲ್ಲಿ ಚಾಲಕರು, ಹೆಲ್ಪರ್ ಹಾಗೂ ಅಡುಗೆ ಕೆಲಸಗಾರರ ಹುದ್ದೆಗಳಿದ್ದು, ಎಸ್‌ಎಸ್‌ಎಲ್‌ಸಿ ಉತ್ತೀರ್ಣರಾದವರು ಈ ಹುದ್ದೆಗಳಿಗೆ ಅರ್ಹರಾಗಿರುತ್ತಾರೆ.

ಮಂಗಳೂರಿನ ಪಡೀಲ್‌ನಲ್ಲಿರುವ ಜಿಲ್ಲಾಡಳಿತ ಕಟ್ಟಡದ ನೆಲಮಹಡಿಯಲ್ಲಿರುವ ಉದ್ಯೋಗ ವಿನಿಮಯ ಕಚೇರಿಯಲ್ಲಿ ಈ ಸಂದರ್ಶನ ಆಯೋಜಿಸಲಾಗಿದೆ. ಬೆಳಗ್ಗೆ 10:00 ಗಂಟೆಯಿಂದ ಮಧ್ಯಾಹ್ನ 1:30 ರವರೆಗೆ ಪ್ರಕ್ರಿಯೆ ನಡೆಯಲಿದ್ದು, ಆಸಕ್ತ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ತಮ್ಮ ಅಪ್‌ಡೇಟೆಡ್ ಬಯೋಡಾಟಾ ಮತ್ತು ಶೈಕ್ಷಣಿಕ ದಾಖಲೆಗಳೊಂದಿಗೆ ನೇರವಾಗಿ ಹಾಜರಾಗಬಹುದು.

error: Content is protected !!