ತಂದೆಯನ್ನೇ ಕತ್ತಿಯಿಂದ ಕಡಿದು ಕೊಲೆ ಮಾಡಲು ಯತ್ನಿಸಿದ ಮಗ; ಆರೋಪಿ ವಶ

ಬೆಳ್ತಂಗಡಿ: ಕುಡಿದ ಮತ್ತಿನಲ್ಲಿ ಮಗನೇ ತಂದೆಯನ್ನು ಕತ್ತಿಯಿಂದ ಕಡಿದು ಕೊಲೆಗೆ ಯತ್ನಿಸಿದ ಘಟನೆ ಬೆಳ್ತಂಗಡಿ ‌ತಾಲೂಕಿನ‌ ಉಜಿರೆಯಲ್ಲಿ ಇಂದು(ಎ.21) ನಡೆದಿದೆ.

ಉಜಿರೆ ಗ್ರಾಮದ ಮಣಿಕೆ ನಿವಾಸಿ ನಾರಾಯಣ(52) ಗಾಯಾಳು ತಂದೆ, ಆರೋಪಿ, ಭರತ್(25) ಬಂಧಿತ ಆರೋಪಿ.

ನಿಮ್ಮ ಕನಸು ನನಸಾಗಿಸಲು ಮೆಗಾ ಗೋಲ್ಡ್ ಸೇವಿಂಗ್ಸ್ ಸ್ಕೀಮ್ ಸೇರಿ

ನಾರಾಯಣ ಹಾಗೂ ಮಗ ಭರತ್ ನಡುವೆ ಮನೆಯಲ್ಲಿ ಕುಡಿದ ಮತ್ತಿನಲ್ಲಿ ಗಲಾಟೆ ನಡೆದಿದ್ದು, ಮನೆಯ ಹೊರಭಾಗದಲ್ಲಿದ್ದ ತಂದೆಗೆ ಮಗ ಭರತ್ ಕತ್ತಿಯಿಂದ ಕುತ್ತಿಗೆ ಮತ್ತು ಕೈಗೆ ಕಡಿದಿದ್ದಾನೆ. ತಕ್ಷಣ ಪಕ್ಕದ ಮನೆಯವರು ನಾರಾಯಣ ಅವರನ್ನು ಉಜಿರೆ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!