
ರುದ್ರಪ್ರಯಾಗ: ಉತ್ತರಾಖಂಡದ ಪವಿತ್ರ ಚಾರ್ ಧಾಮ್ ಯಾತ್ರೆಗಳ ಪೈಕಿ ಪ್ರಮುಖವಾದ ಕೇದಾರನಾಥ ದೇಗುಲದ ಬಾಗಿಲು ತೆರೆಯುವ ಕ್ಷಣಗಣನೆ ಆರಂಭವಾಗಿದ್ದು, ನಾಳೆ(ಏ.22) ಮುಂಜಾನೆ ದೇಗುಲದ ದ್ವಾರಗಳು ಅಧಿಕೃತವಾಗಿ ಸಾರ್ವಜನಿಕರ ದರ್ಶನಕ್ಕೆ ಮುಕ್ತವಾಗಲಿದೆ.
ನಿಮ್ಮ ಕನಸು ನನಸಾಗಿಸಲು ಮೆಗಾ ಗೋಲ್ಡ್ ಸೇವಿಂಗ್ಸ್ ಸ್ಕೀಮ್ ಸೇರಿ

ಮಹಾದೇವನ ಪವಿತ್ರ ಸನ್ನಿಧಿಯ ಬಾಗಿಲು ತೆರೆಯುವ ಹಿನ್ನೆಲೆಯಲ್ಲಿ ದೇಗುಲವನ್ನು ಟನ್‌ಗಟ್ಟಲೆ ಬಗೆಬಗೆಯ ಹೂವುಗಳಿಂದ ಅತ್ಯಂತ ಸುಂದರವಾಗಿ ಅಲಂಕರಿಸಲಾಗಿದೆ. ಬಾಗಿಲು ತೆರೆಯುವ ಸಮಾರಂಭಕ್ಕೆ ಸಾಕ್ಷಿಯಾಗಲು ದೇಶದ ವಿವಿಧ ಭಾಗಗಳಿಂದ ಸಾವಿರಾರು ಭಕ್ತರು ಈಗಾಗಲೇ ರುದ್ರಪ್ರಯಾಗದ ಕೇದಾರನಾಥಕ್ಕೆ ಆಗಮಿಸಿದ್ದಾರೆ. ಕೊರೆಯುವ ಚಳಿಯನ್ನೂ ಲೆಕ್ಕಿಸದೆ ಶಿವನ ದರ್ಶನಕ್ಕಾಗಿ ಭಕ್ತರು ಕಾತರದಿಂದ ಕಾಯುತ್ತಿದ್ದಾರೆ.

ಕೇಂದ್ರ ಮತ್ತು ರಾಜ್ಯ ಸರ್ಕಾರದ ವತಿಯಿಂದ ಯಾತ್ರಾರ್ಥಿಗಳಿಗೆ ಯಾವುದೇ ತೊಂದರೆಯಾಗದಂತೆ ವ್ಯಾಪಕ ಭದ್ರತೆ ಹಾಗೂ ಮೂಲಸೌಕರ್ಯಗಳ ಸಿದ್ಧತೆ ಮಾಡಿಕೊಳ್ಳಲಾಗಿದೆ. ಕೇದಾರನಾಥದ ಕಡಿದಾದ ಹಾದಿಯಲ್ಲಿ ಭಕ್ತರ ಸಂಚಾರಕ್ಕೆ ಯಾವುದೇ ಅಡ್ಡಿಯಾಗದಂತೆ ನಿಗಾ ವಹಿಸಲಾಗಿದೆ. ಹವಾಮಾನ ವೈಪರೀತ್ಯದ ಸಾಧ್ಯತೆಗಳಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನೂ ಕೈಗೊಳ್ಳಲಾಗಿದೆ.