ಬೆಳ್ತಂಗಡಿ: 25 ಕ್ಕೂ ಹೆಚ್ಚು ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ಪಿಕಪ್ ವಾಹನ ಪಲ್ಟಿಯಾದ ಪರಿಣಾಮ ಹತ್ತಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಚಾರ್ಮಾಡಿ ಘಾಟ್ ರಸ್ತೆಯ ಆರನೇ ತಿರುವಿನಲ್ಲಿ ನಡೆದಿದೆ.

ತಕ್ಷಣವೇ ಸ್ಥಳೀಯರ ನೆರವಿನಿಂದ ರಕ್ಷಣಾ ಕಾರ್ಯಾಚರಣೆ ಆರಂಭಿಸಲಾಯಿತು. SKSSF ಕಕ್ಕಿಂಜೆ ಅಂಬುಲೆನ್ಸ್, ಚಾರ್ಮಾಡಿ ಹಸನಬ್ಬ ಅವರ ತಂಡ ಹಾಗೂ ರಾಜ್ಯೋತ್ಸವ ಸೇವಾ ಅಂಬುಲೆನ್ಸ್ ಸೇರಿದಂತೆ ರಿಕ್ಷಾ ಮತ್ತು ಖಾಸಗಿ ಕಾರುಗಳ ಮೂಲಕ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಯಿತು.
ನಿಮ್ಮ ಕನಸು ನನಸಾಗಿಸಲು ಮೆಗಾ ಗೋಲ್ಡ್ ಸೇವಿಂಗ್ಸ್ ಸ್ಕೀಮ್ ಸೇರಿ

ಎಲ್ಲಾ ಗಾಯಾಳುಗಳನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೆಲವರ ಸ್ಥಿತಿ ಗಂಭೀರವಾಗಿದ್ದು ಚಿಕಿತ್ಸೆ ಮುಂದುವರಿದಿದೆ.

ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ನಡೆಸುತ್ತಿದ್ದಾರೆ.