ಜಾಗತಿಕ ಬಂಟರ ಸಂಘಗಳ ಒಕ್ಕೂಟ: ಮುಲ್ಕಿಯ ನಿರ್ಮಾಣ ಹಂತದ ಸಭಾಭವನಕ್ಕೆ ತೋನ್ಸೆ ಆನಂದ ಶೆಟ್ಟಿ ಭೇಟಿ

ಮಂಗಳೂರು: ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಮುಲ್ಕಿ ರಾಷ್ಟ್ರೀಯ ಹೆದ್ದಾರಿ ಬಳಿ ಡಾ. ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ ಅವರ ನೇತೃತ್ವದಲ್ಲಿ ದಾನಿಗಳ ಸಹಕಾರದಿಂದ ನಿರ್ಮಾಣಗೊಳ್ಳಲಿರುವ ಹವಾನಿಯಂತ್ರಿತ ಸಭಾಭವನದ ತೋನ್ಸೆ ಶಶಿರೇಖಾ ಆನಂದ ಶೆಟ್ಟಿ ವೇದಿಕೆ ನಿರ್ಮಾಣ ಹಂತದಲ್ಲಿದ್ದು ಈ ಸಂಬಂಧ ಅಂತರಾಷ್ಟ್ರೀಯ ಮಟ್ಟದ ಖ್ಯಾತ ಉದ್ಯಮಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವಿಶೇಷ ಮಹಾ ನಿರ್ದೇಶಕರಾದ ತೋನ್ಸೆ ಆನಂದ ಶೆಟ್ಟಿ ಅವರು ಭೇಟಿ ನೀಡಿ ಕಾಮಗಾರಿಯ ಪರಿಶೀಲನೆ ನಡೆಸಿದರು.

ನಂತರ ಒಕ್ಕೂಟದ ಪ್ರವೀಣ್ ಭೋಜ ಶೆಟ್ಟಿ ಆಡಳಿತ ಕಚೇರಿಯಲ್ಲಿ ಸಭಾಭವನದ ನಕ್ಷೆ ಮತ್ತು ಇತರ ಮಾಹಿತಿಯನ್ನು ನಿರ್ಮಾಣ ಕಾಮಗಾರಿಯ ಶಿವಪ್ರಸಾದ್ ರೈ ಹಾಗು ಸಹಾಯಕ ಇಂಜಿನಿಯರ್ ಉಡುಪಿ ಏ ಜಿ ಅಸೋಸಿಯೇಟ್ ಧೀರಜ್ ಅವರಿಂದ ಪಡೆದುಕೊಂಡರು.

ನಿಮ್ಮ ಕನಸು ನನಸಾಗಿಸಲು ಮೆಗಾ ಗೋಲ್ಡ್ ಸೇವಿಂಗ್ಸ್ ಸ್ಕೀಮ್ ಸೇರಿ

ಈ ಸಂದರ್ಭದಲ್ಲಿ ಒಕ್ಕೂಟದ ಉಪಾಧ್ಯಕ್ಷರಾದ ಕರ್ನಿರೆ ವಿಶ್ವನಾಥ ಶೆಟ್ಟಿ ಸ್ವಾಗತಿಸಿ, ಗೌರವ ಕಾರ್ಯದರ್ಶಿಗಳಾದ ಇಂದ್ರಾಳಿ ಜಯಕರ ಶೆಟ್ಟಿ ಅವರು ಆನಂದ ಶೆಟ್ಟಿಯವರನ್ನು ಅಭಿನಂದಿಸಿದರು.

ಈ ಸಂದರ್ಭದಲ್ಲಿ ಒಕ್ಕೂಟದ ಜೊತೆ ಕಾರ್ಯದರ್ಶಿ ರಂಗೋಲಿ ಚಂದ್ರಹಾಸ ಶೆಟ್ಟಿ, ಒಕ್ಕೂಟದ ಯುವ ವಿಭಾಗದ ಕಾರ್ಯಾಧ್ಯಕ್ಷರಾದ ಗಿರೀಶ್ ಶೆಟ್ಟಿ ತೆಳ್ಳಾರ್, ಸಂಚಾಲಕರಾದ ಕೊಲ್ಲಾಡಿ ಬಾಲಕೃಷ್ಣರೈ ಕಂಟ್ರಾಕ್ಟರ್ ದಾರರು ಶಿವಪ್ರಸಾದ್ ರೈ ಧೀರಜ್ ಉಡುಪಿ ಉಪಸ್ಥಿತರಿದ್ದರು.

error: Content is protected !!