ಸೇವಾಂಜಲಿ ಚಾರಿಟೇಬಲ್ ಟ್ರಸ್ಟ್ – ಕೆಎಂಸಿ ಆಸ್ಪತ್ರೆ ಸಹಯೋಗದಲ್ಲಿ ರಕ್ತದಾನ ಶಿಬಿರ!

ಮಂಗಳೂರು: ಸೇವಾಂಜಲಿ ಚಾರಿಟೇಬಲ್ ಟ್ರಸ್ಟ್ ಹಾಗೂ ಕೆಎಂಸಿ ಆಸ್ಪತ್ರೆ ಸಹಯೋಗದೊಂದಿಗೆ ರಕ್ತದಾನ ಶಿಬಿರ ಭಾನುವಾರ(ಏ.19) ಬಜಿಲಕೇರಿಯಲ್ಲಿರುವ ಸೇವಾಂಜಲಿ ಏರೆನಾದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಟ್ರಸ್ಟ್ ನ ಪ್ರಮುಖರಾದ ಹನುಮಂತ ಕಾಮತ್ ಮಂಗಳೂರಿನಲ್ಲಿ ತುರ್ತು ಸಂದರ್ಭದಲ್ಲಿ ರಕ್ತದ ಕೊರತೆ ಇರುವುದರ ಬಗ್ಗೆ ನಮ್ಮ ಸೇವಾಂಜಲಿ ಚಾರಿಟೇಬಲ್ ಟ್ರಸ್ಟ್ ನ ಗಮನಕ್ಕೆ ಬಂದ ತಕ್ಷಣ ನಾವು ಕಾರ್ಯಪ್ರವೃತ್ತರಾದೆವು. ಕೂಡಲೇ ರಕ್ತದಾನ ಶಿಬಿರ ಆಯೋಜಿಸಲು ನಿರ್ಧರಿಸಲಾಯಿತು. ಕೊನೆಯ ಕ್ಷಣದಲ್ಲಿ ಈ ಬಗ್ಗೆ ಸಾರ್ವಜನಿಕರಿಗೆ ಮನವಿ ಮಾಡಿದರೂ ಉತ್ತಮ ಸ್ಪಂದನೆ ದೊರಕಿದೆ.

ನಿಮ್ಮ ಕನಸು ನನಸಾಗಿಸಲು ಮೆಗಾ ಗೋಲ್ಡ್ ಸೇವಿಂಗ್ಸ್ ಸ್ಕೀಮ್ ಸೇರಿ

ಒಬ್ಬ ವ್ಯಕ್ತಿ ರಕ್ತದಾನ ಮಾಡುವುದರಿಂದ ಮೂರು ಜೀವ ಉಳಿಸಬಹುದು. ರಕ್ತದಾನ ಮಾಡುವುದರಿಂದ ದಾನಿಗೆ ಯಾವುದೇ ತೊಂದರೆ ಇಲ್ಲ. ಆದ್ದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಯುವಜನಾಂಗ ರಕ್ತದಾನದಲ್ಲಿ ಭಾಗವಹಿಸಬೇಕಾಗಿದೆ. ಸೇವಾಂಜಲಿ ಚಾರಿಟೇಬಲ್ ಟ್ರಸ್ಟ್ ಎರಡೂವರೆ ದಶಕಗಳಿಂದ ರಕ್ತದಾನ ಶಿಬಿರ ಆಯೋಜಿಸುತ್ತಾ ಬರುತ್ತಿದ್ದು, ಇಲ್ಲಿಯ ತನಕ 50ಕ್ಕೂ ಹೆಚ್ಚಿನ ರಕ್ತದಾನ ಶಿಬಿರ ಆಯೋಜಿಸಿದ ಧನ್ಯತಾಭಾವ ಹೊಂದಿದೆ ಎಂದು ತಿಳಿಸಿದರು.

ಸೇವಾಂಜಲಿ ಚಾರಿಟೇಬಲ್ ಟ್ರಸ್ಟ್ ಪ್ರಮುಖರು, ಕೆಎಂಸಿ ಆಸ್ಪತ್ರೆಯ ವೈದ್ಯರು ಉಪಸ್ಥಿತರಿದ್ದರು.

error: Content is protected !!