
ತ್ರಿಶೂರ್: ತಿರುವಂಬಾಡಿಯ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ 13 ಮಂದಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಅಲ್ಲದೇ 27 ಕಾರ್ಮಿಕರು ತೀವ್ರವಾಗಿ ಗಾಯಗೊಂಡಿದ್ದಾರೆ ಎನ್ನಲಾಗಿದೆ.
ನಿಮ್ಮ ಕನಸು ನನಸಾಗಿಸಲು ಮೆಗಾ ಗೋಲ್ಡ್ ಸೇವಿಂಗ್ಸ್ ಸ್ಕೀಮ್ ಸೇರಿ

ಅಪಘಾತದ ಸಮಯದಲ್ಲಿ ಸುಮಾರು 40 ಜನ ಆ ಸ್ಥಳದಲ್ಲಿದ್ದರು ಎಂಬ ಪ್ರಾಥಮಿಕ ಮಾಹಿತಿಯೊಂದು ಬಹಿರಂಗಗೊಂಡಿದೆ. ಹಬ್ಬಕ್ಕಾಗಿ ಪಟಾಕಿ ತಯಾರಿಸಲಾಗುತ್ತಿದ್ದ ಘಟಕದಲ್ಲಿ ಭೀಕರ ಸ್ಫೋಟ ಸಂಭವಿಸಿದ್ದು ಹಲವರು ಗಾಯಗೊಂಡಿದ್ದು, ಕೆಲವರ ಸ್ಥಿತಿ ಗಂಭೀರವಾಗಿದೆ. ಘಟನೆಯ ಬಳಿಕ ಅಗ್ನಿಶಾಮಕ ದಳ, ಪೊಲೀಸರು ಮತ್ತು ಆಂಬ್ಯುಲೆನ್ಸ್ ಸಿಬ್ಬಂದಿ ತಕ್ಷಣ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯ ಆರಂಭಿಸಿದರು.

ಆದರೆ ಸ್ಫೋಟದ ಬಳಿಕವೂ ಕೆಲವು ಸಮಯಗಳವರೆಗೆ ಸಣ್ಣ ಸ್ಫೋಟಗಳು ಮುಂದುವರಿದಿದ್ದರಿಂದ ರಕ್ಷಣಾ ಕಾರ್ಯಕ್ಕೆ ಅಡಚಣೆ ಉಂಟಾಗಿದೆ. ಇನ್ನೂ ಹಲವರು ಘಟಕದೊಳಗೆ ಸಿಲುಕಿರುವ ಸಾಧ್ಯತೆ ಇದ್ದು, ಅವರನ್ನು ರಕ್ಷಿಸಲು ಕಾರ್ಯಾಚರಣೆ ಮುಂದುವರಿದಿದೆ.

ಘಟನೆಯ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.