ಹಳೆಯಂಗಡಿ: ಇಲ್ಲಿನ ಶ್ರೀ ವಿದ್ಯಾವಿನಾಯಕ ಯುವಕ ಮಂಡಲ (ರಿ), ಶ್ರೀ ವಿದ್ಯಾವಿನಾಯಕ ರಜತ ಸೇವಾ ಟ್ರಸ್ಟ್, ಯುವತಿ ಮತ್ತು ಮಹಿಳಾ ಮಂಡಲ ಹಾಗೂ ಕಿಶೋರ ಕಿಶೋರಿ ಸಂಘದ ಜಂಟಿ ಆಶ್ರಯದಲ್ಲಿ ಹಮ್ಮಿಕೊಳ್ಳಲಾದ ‘ವಿದ್ಯಾ-ವಿನಯ-2026’ ಸಂಸ್ಕಾರ ಮತ್ತು ಸಂಸ್ಕೃತಿ ಶಿಬಿರಕ್ಕೆ ರವಿವಾರ ಚಾಲನೆ ನೀಡಲಾಯಿತು.

ದಕ್ಷಿಣ ಕನ್ನಡ ಜಿಲ್ಲಾ ಬಾಲ ನ್ಯಾಯ ಮಂಡಳಿಯ ಸದಸ್ಯೆ ಶ್ರೀಮತಿ ಸಚಿತ ನಂದಗೋಪಾಲ್ ಅವರು ಶಿಬಿರಾರ್ಥಿಗಳೊಂದಿಗೆ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಇಂದಿನ ಯುವ ಪೀಳಿಗೆಗೆ ಶಿಕ್ಷಣದ ಜೊತೆಗೆ ಸಂಸ್ಕಾರ ಮತ್ತು ನಮ್ಮ ಪರಂಪರೆಯ ಅರಿವು ಮೂಡಿಸುವುದು ಅತ್ಯಗತ್ಯವಾಗಿದೆ ಎಂದು ಆಶಯ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಹಳೆಯಂಗಡಿ ಶ್ರೀ ಸಾಯಿ ಸೂಪರ್ ಬಜಾರ್‌ನ ಮಾಲಕ ಶ್ರೀ ಗಣೇಶ್ ಪ್ರಸಾದ್ ಭಾಗವಹಿಸಿದ್ದರು. ವೇದಿಕೆಯಲ್ಲಿ ಯುವಕ ಮಂಡಲದ ಅಧ್ಯಕ್ಷ ಕಿರಣ್ ರಾಜ್ ಬಿ, ರಜತ ಸೇವಾ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಟ್ಯಾನಿ ಡಿ ಕೋಸ್ಟ, ಮಹಿಳಾ ಮಂಡಲದ ಪ್ರಧಾನ ಕಾರ್ಯದರ್ಶಿ ಪ್ರೇಮಲತಾ ಯೋಗೇಶ್ ಮತ್ತು ಯುವತಿ ಮಂಡಲದ ಅಧ್ಯಕ್ಷೆ ಕುಮಾರಿ ನಿರ್ಮಿತ ಸಾಲ್ಯಾನ್ ಉಪಸ್ಥಿತರಿದ್ದರು.
ನಿಮ್ಮ ಕನಸು ನನಸಾಗಿಸಲು ಮೆಗಾ ಗೋಲ್ಡ್ ಸೇವಿಂಗ್ಸ್ ಸ್ಕೀಮ್ ಸೇರಿ

ಯುವಕ ಮಂಡಲದ ಅಧ್ಯಕ್ಷ ಕಿರಣ್ ರಾಜ್ ಬಿ ಸ್ವಾಗತಿಸಿದರು. ಕುಮಾರಿ ಪೂರ್ವಿಕ ಪ್ರಾರ್ಥಿಸಿ, ಕುಮಾರಿ ನಿರ್ಮಿತ ವಂದಿಸಿದರು. ಕುಮಾರಿ ಕಾತ್ಯಾಯನಿ ಇಡೀ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಿರೂಪಿಸಿದರು.