ಸೂರ್ಯನಾರಾಯಣ ದೇವಸ್ಥಾನದ ನಾಗದೇವರ ಪ್ರತಿಷ್ಠಾಪನೆಯ ಆಮಂತ್ರಣ ಪತ್ರಿಕೆ ಬಿಡುಗಡೆ

ಮಂಗಳೂರು: ಮಳಲಿ(ಮಣೇಲ್)‌ ದೇವರಗುಡ್ಡೆ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ವತಿಯಿಂದ ನಾಗದೇವರ ಪ್ರತಿಷ್ಠಾಪನೆಯ ಪೂರ್ವಭಾವಿ ಸಭೆಯು ಇತ್ತೀಚೆಗೆ ಯಶಸ್ವಿಯಾಗಿ ಜರುಗಿತು. ಈ ಶುಭ ಸಂದರ್ಭದಲ್ಲಿ ಕ್ಷೇತ್ರದಲ್ಲಿ ಶೀಘ್ರದಲ್ಲೇ ನಡೆಯಲಿರುವ ನಾಗದೇವರ ಪ್ರತಿಷ್ಠಾಪನಾ ಕಾರ್ಯಕ್ರಮದ ಅಧಿಕೃತ ಆಮಂತ್ರಣ ಪತ್ರಿಕೆಯನ್ನು ಗಣ್ಯರ ಸಮ್ಮುಖದಲ್ಲಿ ಬಿಡುಗಡೆಗೊಳಿಸಲಾಯಿತು.

ದೇವಸ್ಥಾನದ ಅಭಿವೃದ್ಧಿ ಮತ್ತು ಜೀರ್ಣೋದ್ಧಾರ ಕಾರ್ಯಗಳಿಗೆ ಹೆಚ್ಚಿನ ವೇಗ ನೀಡುವ ನಿಟ್ಟಿನಲ್ಲಿ ಸಭೆಯಲ್ಲಿ ಎರಡು ಪ್ರಮುಖ ನಿರ್ಣಯಗಳನ್ನು ಕೈಗೊಳ್ಳಲಾಯಿತು. ಕ್ಷೇತ್ರದ ಧಾರ್ಮಿಕ ಚಟುವಟಿಕೆಗಳಲ್ಲಿ ಮಹಿಳೆಯರನ್ನು ಸಕ್ರಿಯವಾಗಿ ತೊಡಗಿಸಿಕೊಳ್ಳಲು ʻಮಹಿಳಾ ಜೀರ್ಣೋದ್ಧಾರ ಸಮಿತಿ’ಯನ್ನು ಹಾಗೂ ಭಜನಾ ಕಾರ್ಯಕ್ರಮಗಳ ಸುಗಮ ನಿರ್ವಹಣೆಗಾಗಿ ʻಭಜನಾ ನಿರ್ವಹಣಾ ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಯಿತು.

ನಿಮ್ಮ ಕನಸು ನನಸಾಗಿಸಲು ಮೆಗಾ ಗೋಲ್ಡ್ ಸೇವಿಂಗ್ಸ್ ಸ್ಕೀಮ್ ಸೇರಿ

ಸಭೆಯ ಅಧ್ಯಕ್ಷತೆಯನ್ನು ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ಶೇಖರ್ ಜೋಗಿ ಮಟ್ಟಿ ವಹಿಸಿ, ಜೀರ್ಣೋದ್ಧಾರ ಕಾರ್ಯದಲ್ಲಿ ಭಕ್ತಾದಿಗಳ ಸಹಕಾರದ ಮಹತ್ವದ ಬಗ್ಗೆ ತಿಳಿಸಿದರು. ವೇದಿಕೆಯಲ್ಲಿ ಕಾರ್ಯಾಧ್ಯಕ್ಷರಾದ ಭಾಸ್ಕರ ಭಟ್ ಗಂಜಿಮಠ ಉಪಸ್ಥಿತರಿದ್ದು, ಮುಂದಿನ ಧಾರ್ಮಿಕ ಕಾರ್ಯಕ್ರಮಗಳ ರೂಪುರೇಷೆಗಳ ಬಗ್ಗೆ ಮಾಹಿತಿ ನೀಡಿದರು.

ಕಾರ್ಯಕ್ರಮವನ್ನು ಪ್ರಧಾನ ಕಾರ್ಯದರ್ಶಿ ಶಿವರಾಜ್ ನಾರಳ ನಿರೂಪಿಸಿದರು. ಸಂಘಟನಾ ಕಾರ್ಯದರ್ಶಿ ಹರೀಶ್ ಮಟ್ಟಿ ವಂದನಾರ್ಪಣೆ ಮಾಡಿದರು. ಸಭೆಯಲ್ಲಿ ಕ್ಷೇತ್ರದ ಹಿರಿಯರು, ಸಮಿತಿಯ ಸದಸ್ಯರು ಹಾಗೂ ನೂರಾರು ಭಕ್ತಾದಿಗಳು ಪಾಲ್ಗೊಂಡು ದೇವಸ್ಥಾನದ ಅಭಿವೃದ್ಧಿ ಕಾರ್ಯಕ್ಕೆ ಬೆಂಬಲ ಸೂಚಿಸಿದರು.

error: Content is protected !!