ಬೆಳ್ತಂಗಡಿ: ಎರಡು ದಿನಗಳ ಹಿಂದೆ ಮಡಂತ್ಯಾರು ಸಮೀಪದ ಪಾರೆಂಕಿಯಲ್ಲಿ ದ್ವಿಚಕ್ರ ವಾಹನಗಳ ನಡುವೆ ನಡೆದ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯೋರ್ವರು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ನಡೆದಿದೆ.

ಪಾರೆಂಕಿ ನಿವಾಸಿ ಕೃಷ್ಣ ( 55) ಮೃತ ವ್ಯಕ್ತಿ.
ನಿಮ್ಮ ಕನಸು ನನಸಾಗಿಸಲು ಮೆಗಾ ಗೋಲ್ಡ್ ಸೇವಿಂಗ್ಸ್ ಸ್ಕೀಮ್ ಸೇರಿ
ಎ.20ರಂದು ಬೆಳ್ತಂಗಡಿ ತಾಲೂಕಿನ ಪಾರೆಂಕಿ ಗ್ರಾಮದ ಮಾರಿಗುಡಿ ರಾಮನಗರ ಕ್ರಾಸ್ ಬಳಿಯಲ್ಲಿ ಸೈಪುದ್ದೀನ್ ಎಂಬಾತ ಮಡಂತ್ಯಾರುವಿನಿಂದ ಬಳ್ಳಮಂಜ ಕಡೆಗೆ ಬೈಕ್ ಅನ್ನು ಚಲಾಯಿಸಿಕೊಂಡು ಬಂದು ಬಳ್ಳಮಂಜ ಕಡೆಯಿಂದ ಮಡಂತ್ಯಾರು ಕಡೆಗೆ ಹೋಗುತ್ತಿದ್ದ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದ್ದಾರೆ ಎನ್ನಲಾಗಿದೆ.

ಈ ಸಂದರ್ಭದಲ್ಲಿ ಇಬ್ಬರಿಗೂ ಗಾಯಗಳಾಗಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಕೃಷ್ಣ ಅವರನ್ನು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತಾದರೂ, ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದು, ಈ ಬಗ್ಗೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
