ಮಂಗಳೂರು:ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶವನ್ನು ಇಂದು(ಏ.23) ಮಧ್ಯಾಹ್ನ 12 ಗಂಟೆಗೆ ಅಧಿಕೃತವಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಬಿಡುಗಡೆ ಪ್ರಕಟಿಸಲಿದ್ದಾರೆ.

ಈ ಬಾರಿ ರಾಜ್ಯದಾದ್ಯಂತ 2,870 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆದಿದ್ದು, ಒಟ್ಟು 8,65,988 ವಿದ್ಯಾರ್ಥಿಗಳು ಹಾಜರಾಗಿದ್ದರು. ಫಲಿತಾಂಶ ಪ್ರಕಟವಾದ ನಂತರ ವಿದ್ಯಾರ್ಥಿಗಳು ಅಧಿಕೃತ ವೆಬ್‌ಸೈಟ್‌ಗಳಲ್ಲಿ ತಮ್ಮ ಅಂಕಪಟ್ಟಿಯನ್ನು ಪರಿಶೀಲಿಸಬಹುದು.

ತೃತೀಯ ಭಾಷೆ ಹಿಂದಿಗೆ ಅಂಕಗಳ ಬದಲು ಗ್ರೇಡ್ ನೀಡುವ ಬಗ್ಗೆ ಸರ್ಕಾರ ಹಿಂದೆ ಚಿಂತನೆ ನಡೆಸಿತ್ತು. ಆದರೆ ನ್ಯಾಯಾಲಯದ ನಿರ್ದೇಶನದ ಹಿನ್ನೆಲೆಯಲ್ಲಿ, ಈ ಬಾರಿ ಹಿಂದಿಗೂ ಅಂಕಗಳನ್ನು ನೀಡಲು ಶಿಕ್ಷಣ ಇಲಾಖೆ ನಿರ್ಧರಿಸಿದೆ. ಈ ವಿಷಯವಾಗಿ ಸಚಿವ ಮಧು ಬಂಗಾರಪ್ಪ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದರು.
ನಿಮ್ಮ ಕನಸು ನನಸಾಗಿಸಲು ಮೆಗಾ ಗೋಲ್ಡ್ ಸೇವಿಂಗ್ಸ್ ಸ್ಕೀಮ್ ಸೇರಿ
ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಸರಳವಾಗಿ ಮತ್ತು ವೇಗವಾಗಿ ಪರಿಶೀಲಿಸಲು ಅಧಿಕೃತ ವೆಬ್‌ಸೈಟ್‌ಗಳನ್ನು ಬಳಸುವಂತೆ ಸೂಚಿಸಲಾಗಿದೆ.

ಎಸ್ಸೆಸ್ಸೆಲ್ಸಿ ಪರೀಕ್ಷೆಯಫಲಿತಾಂಶವು https://karresults.nic.in ವೆಬ್‌ಸೈಟ್‌ನಲ್ಲಿ ಪ್ರಕಟವಾಗಲಿದೆ. ಜತೆಗೆ karnatakaOne ಮೊಬೈಲ್ ಆ್ಯಪ್ ಮೂಲಕವೂ ಫಲಿತಾಂಶ ಪಡೆಯಬಹುದು. ಜತೆಗೆ ವಿದ್ಯಾರ್ಥಿಗಳ ನೋಂದಾಯಿತ ಮೊಬೈಲ್ ಸಂಖ್ಯೆಗೆ ವಾಟ್ಸಾಪ್ ಅಥವಾ ಎಸ್ಎಂಎಸ್ ಸಂದೇಶದ ಮೂಲಕವೂ ಫಲಿತಾಂಶದ ಮಾಹಿತಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ರವಾನಿಸಲಿದೆ.

ಈ ವರ್ಷ ಮೊದಲ ಬಾರಿಗೆ ಫಲಿತಾಂಶದ ಅಂಕಪಟ್ಟಿ ಡಿಜಿಲಾಕರ್ ಮೂಲಕ ಏ.23 ರಂದು ಮಧ್ಯಾಹ್ನ12 ಗಂಟೆಗೆ ಲಭ್ಯವಿರುವಂತೆ ಮಾಡಲಾಗುವುದು. https:// www.digilocker.gov.in ಮೂಲಕ ಅಂಕಪಟ್ಟಿಯನ್ನು ಡೌನ್ ಲೋಡ್ ಮಾಡಿಕೊಳ್ಳಬಹುದು. ಅಂಕಪಟ್ಟಿ ಡೌನ್‌ಲೋಡ್ ಮಾಡಿಕೊಳ್ಳುವ ಪ್ರಕ್ರಿಯೆಯನ್ನು https://tinyurl.com/mw84wmh9 ಲಿಂಕ್ ಬಳಸಿ ತಿಳಿದುಕೊಳ್ಳಬಹುದು ಎಂದು ಮಂಡಳಿ ತಿಳಿಸಿದೆ.