ಇಂದಿನಿಂದ ರಾಜ್ಯಾದ್ಯಂತ ಸಿಇಟಿ ಪರೀಕ್ಷೆ ಆರಂಭ

ಮಂಗಳೂರು: ಇಂದಿನಿಂದ ರಾಜ್ಯಾದ್ಯಂತ ಸಿಇಟಿ ಪರೀಕ್ಷೆಗಳೂ ಆರಂಭವಾಗುತ್ತಿದ್ದು, ಈ ಬಾರಿ ಸುಮಾರು 3.3 ಲಕ್ಷ ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ.

ಪ್ರಾಧಿಕಾರವು ಪ್ರತಿ ವರ್ಷ ಎಂಜಿನಿಯರಿಂಗ್, ಕೃಷಿ ವಿಜ್ಞಾನ, ಪಶು ವೈದ್ಯಕೀಯ ಸೇರಿದಂತೆ ವಿವಿಧ ವೃತ್ತಿಪರ ಪದವಿ ಕೋರ್ಸ್‍ಗಳ ಪ್ರವೇಶಕ್ಕೆ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ನಡೆಸಲಿದ್ದು, ಈ ಬಾರಿ ಎ.23ರಂದು ಭೌತಶಾಸ್ತ್ರ ಮತ್ತು ರಸಾಯನಶಾಸ್ತ್ರ ಹಾಗೂ ಎ.24ರಂದು ಗಣಿತ ಮತ್ತು ಜೀವಶಾಸ್ತ್ರ ವಿಷಯಗಳ ಪರೀಕ್ಷೆಗಳು ನಡೆಯಲಿದೆ.

ನಿಮ್ಮ ಕನಸು ನನಸಾಗಿಸಲು ಮೆಗಾ ಗೋಲ್ಡ್ ಸೇವಿಂಗ್ಸ್ ಸ್ಕೀಮ್ ಸೇರಿ

ಪರೀಕ್ಷಾ ಅಕ್ರಮಗಳನ್ನು ತಡೆಯಲು ಎಲ್ಲಾ ಕೇಂದ್ರಗಳಲ್ಲಿ ಜಾಮರ್‌ಗಳನ್ನು ಅಳವಡಿಸಲಾಗಿದೆ. ಕೇಂದ್ರಗಳ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರು ಈ ಕುರಿತು ಆದೇಶ ನೀಡಿದ್ದಾರೆ. ಕೆಇಎ (KEA) ಕಚೇರಿಯಲ್ಲಿ ವಿಶೇಷ ನಿಯಂತ್ರಣ ಕೇಂದ್ರವನ್ನು ಸ್ಥಾಪಿಸಿ ಪರೀಕ್ಷೆಗಳ ಮೇಲೆ ಕಣ್ಣಿಟ್ಟಲಾಗಿದೆ.

ಅನಗತ್ಯ ಗೊಂದಲ ತಪ್ಪಿಸಲು ಇದೇ ಮೊದಲ ಬಾರಿಗೆ ಪ್ರತಿ ಕೇಂದ್ರಕ್ಕೆ ಒಬ್ಬ ವಸ್ತ್ರ ಸಂಹಿತೆ ಅಧಿಕಾರಿಯನ್ನು ನೇಮಿಸಲಾಗಿದೆ. ಪರೀಕ್ಷಾ ಕೇಂದ್ರಕ್ಕೆ ಬರುವ ಪುರುಷ/ಮಹಿಳಾ ಅಭ್ಯರ್ಥಿಗಳು ಅರ್ಧ ತೋಳಿನ ಬಟ್ಟೆ ಧರಿಸಬೇಕು. ಸಾಧ್ಯವಾದಷ್ಟು ಕಾಲರ್ ಇಲ್ಲದಿರುವುದನ್ನು ಹಾಕಿಕೊಂಡು ಬಂದರೆ ಉತ್ತಮ. ಪುರುಷರು, ಜೇಬು ಇಲ್ಲದ/ಕಡಿಮೆ ಜೇಬುಗಳಿರುವ ಸರಳ ಪ್ಯಾಂಟ್ ಧರಿಸಬೇಕು. ಕುರ್ತಾ ಪೈಜಾಮ/ಜೀನ್ಸ್ ಪ್ಯಾಂಟ್‍ಗೆ ಅವಕಾಶ ಇರುವುದಿಲ್ಲ. ಶೂ ನಿಷೇಧಿಸಲಾಗಿದೆ. ಮೊಬೈಲ್, ಬ್ಲೂಟೂತ್, ಇಯರ್ ಫೋನ್, ಮೈಕ್ರೋ ಫೋನ್ ಇತ್ಯಾದಿ ಎಲೆಕ್ಟ್ರಾನಿಕ್ ವಸ್ತುಗಳನ್ನು ಸಂಪೂರ್ಣ ನಿಷೇಧಿಸಲಾಗಿದೆ.

error: Content is protected !!