ಉಳ್ಳಾಲ: ತೊಕ್ಕೊಟ್ಟು ಫ್ಲೈ ಓವರ್ ನಲ್ಲಿ ನಡೆದಿದ್ದ ಟ್ಯಾಬ್ಲೆಟ್ ಆರಿಫ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಮತ್ತೋರ್ವ ಪ್ರಮುಖ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಬಂಧಿತರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ.

ಮುಹಮ್ಮದ್ ಸುಹೈಲ್ ಅಲಿಯಾಸ್ ಚಿಯಾ(24) ಬಂಧಿತ ಆರೋಪಿ.
ನಿಮ್ಮ ಕನಸು ನನಸಾಗಿಸಲು ಮೆಗಾ ಗೋಲ್ಡ್ ಸೇವಿಂಗ್ಸ್ ಸ್ಕೀಮ್ ಸೇರಿ
ಆರಿಫ್ ಮೇಲೆ ನಡೆದ ಮೊದಲ ದಾಳಿಗೆ ಮುಹಮ್ಮದ್ ಸುಹೈಲ್ ಸಹಕಾರ ನೀಡಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಪೊಲೀಸರು ವಿವರವಾದ ತನಿಖೆಯ ನಂತರ ಸುಹೈಲ್ ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಆರಿಫ್ ಕೊಲೆ ಪ್ರಕರಣದಲ್ಲಿ 15 ಮಂದಿಯ ಪಾತ್ರ ಇರುವುದು ಪೊಲೀಸ್ ತನಿಖೆ ವೇಳೆ ಬೆಳಕಿಗೆ ಬಂದಿತ್ತು.