ಕಾಸರಗೋಡು: 17ರ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ; 36ರ ಮಹಿಳೆಯ ಮೇಲೆ ಪೋಕ್ಸೋ ಕೇಸ್

ಕಾಸರಗೋಡು: ರಾಜಪುರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 17 ವರ್ಷದ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ 36 ವರ್ಷದ ಮಹಿಳೆಯೊಬ್ಬರ ವಿರುದ್ಧ ಪೋಕ್ಸೋ (POSCO) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಮತ್ತೊಂದು ಪ್ರಕರಣದ ತನಿಖೆಯ ಸಂದರ್ಭದಲ್ಲಿ ಈ ಆಘಾತಕಾರಿ ವಿಷಯ ಬೆಳಕಿಗೆ ಬಂದಿದೆ.

ಇತ್ತೀಚೆಗೆ ಕಾಞಂಗಾಡ್ ಜಿಲ್ಲಾ ಆಸ್ಪತ್ರೆಯಲ್ಲಿ ನಾಲ್ಕು ವರ್ಷದ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಇದೇ 17 ವರ್ಷದ ಬಾಲಕನ ವಿರುದ್ಧ ಹೊಸದುರ್ಗ ಪೊಲೀಸರು ಪ್ರಕರಣ ದಾಖಲಿಸಿದ್ದರು. ದೈಹಿಕ ವಿಕಲಚೇತನನಾದ ಈ ಬಾಲಕನನ್ನು ವಿಚಾರಣೆ ನಡೆಸುತ್ತಿದ್ದಾಗ, ತಾನು ಕೂಡ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿರುವುದಾಗಿ ಪೊಲೀಸರ ಮುಂದೆ ಹೇಳಿಕೆ ನೀಡಿದ್ದಾನೆ.

ಬಾಲಕ ನೀಡಿದ ಹೇಳಿಕೆಯ ಆಧಾರದ ಮೇಲೆ ಮೊದಲು ಹೊಸದುರ್ಗ ಪೊಲೀಸ್ ಠಾಣೆಯಲ್ಲಿ ಮಹಿಳೆಯ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ಆದರೆ, ಘಟನೆಯು ರಾಜಪುರಂ ಪೊಲೀಸ್ ವ್ಯಾಪ್ತಿಯಲ್ಲಿ ನಡೆದ ಕಾರಣ, ಹೆಚ್ಚಿನ ತನಿಖೆಗಾಗಿ ಪ್ರಕರಣವನ್ನು ರಾಜಪುರಂ ಪೊಲೀಸರಿಗೆ ಹಸ್ತಾಂತರಿಸಲಾಗಿದೆ.

ನಿಮ್ಮ ಕನಸು ನನಸಾಗಿಸಲು ಮೆಗಾ ಗೋಲ್ಡ್ ಸೇವಿಂಗ್ಸ್ ಸ್ಕೀಮ್ ಸೇರಿ

ಪೊಲೀಸರ ಸ್ಪಷ್ಟನೆ:
ಬಾಲಕ ಆರೋಪಿಯಾಗಿರುವ ಪ್ರಕರಣ ಮತ್ತು ಬಾಲಕ ಸಂತ್ರಸ್ತನಾಗಿರುವ ಈ ಪ್ರಕರಣಕ್ಕೆ ಯಾವುದೇ ಸಂಬಂಧವಿಲ್ಲ ಎಂದು ರಾಜಪುರಂ ಪೊಲೀಸರು ಸ್ಪಷ್ಟಪಡಿಸಿದ್ದಾರೆ. ಸದ್ಯ ಪೊಲೀಸರು ಮಹಿಳೆಯ ಗುರುತನ್ನು ಬಹಿರಂಗಪಡಿಸಿಲ್ಲ ಮತ್ತು ಘಟನೆಯ ಕುರಿತು ತೀವ್ರ ತನಿಖೆ ನಡೆಸುತ್ತಿದ್ದಾರೆ.

error: Content is protected !!