ಮಹಿಳೆಯರ ಹಕ್ಕು ಕಸಿಯುವ ಹಪಾಹಪಿ ನಿಮಗ್ಯಾಕೆ? ಕಾಂಗ್ರೆಸ್‌ಗೆ ಜೆಡಿಎಸ್‌ನ ಜಾಕೆ ಮಾಧವ ಗೌಡ ಸವಾಲು

ಮಂಗಳೂರು: ಮಹಿಳಾ ಮೀಸಲಾತಿ ವಿಚಾರದಲ್ಲಿ ಕಾಂಗ್ರೆಸ್ ನೇತೃತ್ವದ ವಿರೋಧ ಪಕ್ಷಗಳು ಪ್ರದರ್ಶಿಸುತ್ತಿರುವ ಇಬ್ಬಂದಿ ನೀತಿ ಅತ್ಯಂತ ಖಂಡನೀಯ ಎಂದು ಜೆಡಿಎಸ್ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಜಾಕೆ ಮಾಧವ ಗೌಡ ತೀಕ್ಷ್ಣವಾಗಿ ವಾಗ್ದಾಳಿ ನಡೆಸಿದ್ದಾರೆ.

ಮಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಿಳೆಯರಿಗೆ ಹಕ್ಕು ನೀಡುವ ವಿಚಾರದಲ್ಲಿ ರಾಜಕೀಯ ಮಾಡುತ್ತಿರುವ ಕಾಂಗ್ರೆಸ್‌ನ ‘ಮಹಿಳಾ ವಿರೋಧಿ’ ಮುಖವಾಡ ಬಯಲಾಗಿದೆ. ದಶಕಗಳ ಹಿಂದೆಯೇ ಮಹಿಳಾ ಮೀಸಲಾತಿ ಮಸೂದೆಯನ್ನು ಮಂಡಿಸಿದ್ದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ದೂರದೃಷ್ಟಿಯನ್ನು ಕಾಂಗ್ರೆಸ್ ಅಂದು ಬೆಂಬಲಿಸಿರಲಿಲ್ಲ. ಕರ್ನಾಟಕದಲ್ಲಿ ಪಂಚಾಯತ್ ರಾಜ್ ವ್ಯವಸ್ಥೆಯ ಮೂಲಕ ಮಹಿಳೆಯರಿಗೆ ಮೊದಲ ಬಾರಿಗೆ ಶಕ್ತಿ ತುಂಬಿದ್ದು ಇದೇ ದೇವೇಗೌಡರು. ಆದರೆ ಇಂದು ಮಸೂದೆ ಜಾರಿಯಾಗುವ ಹಂತದಲ್ಲಿದ್ದಾಗ ಕಾಂಗ್ರೆಸ್ ಕ್ಷುಲ್ಲಕ ಕಾರಣಗಳನ್ನು ನೀಡಿ ಕಾಲಹರಣ ಮಾಡುತ್ತಿದೆ ಎಂದು ಅವರು ಕಿಡಿಕಾರಿದರು.

ನಿಮ್ಮ ಕನಸು ನನಸಾಗಿಸಲು ಮೆಗಾ ಗೋಲ್ಡ್ ಸೇವಿಂಗ್ಸ್ ಸ್ಕೀಮ್ ಸೇರಿ

ಪ್ರಸ್ತುತ ಲೋಕಸಭೆಯಲ್ಲಿ ಮಹಿಳೆಯರ ಪ್ರಾತಿನಿಧ್ಯ ಕೇವಲ ಶೇ. 14 ರಷ್ಟಿದೆ. ಈ ಪ್ರಮಾಣವನ್ನು ಶೇ. 33ಕ್ಕೆ ಏರಿಸುವ ಎನ್‌ಡಿಎ ಸರ್ಕಾರದ ಪ್ರಾಮಾಣಿಕ ಪ್ರಯತ್ನಕ್ಕೆ ಅಡ್ಡಿಪಡಿಸುವುದು ಮಹಿಳಾ ಸಮುದಾಯಕ್ಕೆ ಮಾಡುತ್ತಿರುವ ದ್ರೋಹ. ಜನಸಂಖ್ಯೆ ಹೆಚ್ಚಾದಂತೆ ಪ್ರತಿನಿಧಿಗಳ ಸಂಖ್ಯೆ ಹೆಚ್ಚಾಗುವುದು ಪ್ರಜಾಪ್ರಭುತ್ವದ ಅಗತ್ಯವಾಗಿದೆ. ಅದನ್ನು ವಿರೋಧಿಸುವುದು ಪ್ರಜಾಪ್ರಭುತ್ವದ ಆಶಯಗಳಿಗೇ ವಿರುದ್ಧವಾಗಿದೆ ಎಂದು ಮಾಧವ ಗೌಡ ಅಂಕಿ-ಅಂಶಗಳ ಸಮೇತ ವಿವರಿಸಿದರು.

ವಿರೋಧ ಪಕ್ಷಗಳು ಕೇವಲ ತಮ್ಮ ಮತಬ್ಯಾಂಕ್ ರಾಜಕೀಯಕ್ಕಾಗಿ ದೇಶದ ಹಿತವನ್ನು ಬಲಿಗೊಡುತ್ತಿವೆ. ಹೊಸ ಸಂಸತ್ ಭವನ ನಿರ್ಮಾಣವಾಗಿದ್ದು ಭವಿಷ್ಯದ ಭಾರತದ ದೃಷ್ಟಿಯಿಂದ. ಇದನ್ನು ವಿರೋಧಿಸುವ ಬದಲು ರಚನಾತ್ಮಕವಾಗಿ ಸ್ಪಂದಿಸಬೇಕಾದ ವಿರೋಧ ಪಕ್ಷಗಳು ದೇಶವನ್ನು ದುರ್ಬಲಗೊಳಿಸುತ್ತಿವೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.

ಗೋಷ್ಠಿಯಲ್ಲಿ  ಕಾರ್ಯಾಧ್ಯಕ್ಷ  ಶಶಿರಾಜ್‌ ಶೆಟ್ಟಿ ಕೊಳಂಬೆ, ಬ್ಲಾಕ್‌ ಅಧ್ಯಕ್ಷ ಯೋಗೀಶ್‌ ಶೆಟ್ಟಿ ಜೆಪ್ಪು ಇದ್ದರು.

error: Content is protected !!