
ಶಿವಮೊಗ್ಗ: ಜೋಕಾಲಿಯಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಕುಣಿಕೆ ಕುತ್ತಿಗೆಯನ್ನು ಬಿಗಿದು ಬಾಲಕಿ ಮೃತಪಟ್ಟ ಘಟನೆ ಜಿಲ್ಲೆಯ ಲಕ್ಕಿನಕೊಪ್ಪದಲ್ಲಿ ನಡೆದಿದೆ.

ವಿದ್ಯಾನಗರದ ಪ್ರಣಮ್ಯ(9) ಮೃತ ಬಾಲಕಿ.
ಬೇಸಿಗೆ ರಜೆ ಕಳೆಯಲು ಚಿಕ್ಕಮ್ಮನ ಮನೆಗೆ ಬಂದಿದ್ದ ಪ್ರಣಮ್ಯ ಮನೆಯ ಕೋಣೆಯ ಬಾಗಿಲು ಹಾಕಿ, ಪಂಚೆಯನ್ನು ಕಟ್ಟಿ ಜೋಕಾಲಿ ಆಡುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ.

ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.