
ಉಡುಪಿ: ಮಣಿಪಾಲದ ಜಿಲ್ಲಾಧಿಕಾರಿ ಕಚೇರಿಯ ಹಿಂಭಾಗದಲ್ಲಿ ಮಾವಿನ ಹಣ್ಣು ಕೊಯ್ಯುತ್ತಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ವಿದ್ಯುತ್ ತಂತಿ ಸ್ಪರ್ಶಿಸಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಇಂದು(ಏ.24) ಬೆಳಿಗ್ಗೆ ನಡೆದಿದೆ.

ಅಲೆವೂರು ನಿವಾಸಿ ಸದಾನಂದ ದೇವಾಡಿಗ(55) ಮೃತ ವ್ಯಕ್ತಿ.
ನಿಮ್ಮ ಕನಸು ನನಸಾಗಿಸಲು ಮೆಗಾ ಗೋಲ್ಡ್ ಸೇವಿಂಗ್ಸ್ ಸ್ಕೀಮ್ ಸೇರಿ
ಸದಾನಂದ ಅವರು ಮಾವಿನ ಹಣ್ಣು ಕೊಯ್ಯುತ್ತಿದ್ದ ವೇಳೆ ಆಕಸ್ಮಿಕವಾಗಿ ವಿದ್ಯುತ್ ಲೈನ್ ಸಂಪರ್ಕಕ್ಕೆ ಬಂದ ಪರಿಣಾಮ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಮತ್ತು ತುರ್ತು ಸೇವಾ ಸಿಬ್ಬಂದಿ ಆಗಮಿಸಿ ಮೃತದೇಹವನ್ನು ರವಾನಿಸಲು ಸಹಾಯ ಮಾಡಿದರು. ಈ ಕುರಿತು ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.