
ಮಣಿಪಾಲ: ಶಿವಳ್ಳಿ ಗ್ರಾಮದ ಖಾಸಗಿ ಹೊಟೇಲ್‌ನಲ್ಲಿ ಕೆಲಸ ಮಾಡಿಕೊಂಡಿದ್ದ ಸಿಬ್ಬಂದಿ ತಂಗುವ ಕೊಠಡಿಯ ಸ್ನಾನ ಗೃಹದಲ್ಲಿ ಬಿದ್ದು ಸಾವನ್ನಪ್ಪಿದ ಘಟನೆ ಶುಕ್ರವಾರ(ಏ.24) ಸಂಭವಿಸಿದೆ.
ನಿಮ್ಮ ಕನಸು ನನಸಾಗಿಸಲು ಮೆಗಾ ಗೋಲ್ಡ್ ಸೇವಿಂಗ್ಸ್ ಸ್ಕೀಮ್ ಸೇರಿ
ಕಾರ್ಕಳ ಮಾಳ ಗ್ರಾಮದ ವಿಜಯ ಎಸ್. (48) ಮೃತ ವ್ಯಕ್ತಿ.

ಎ.24ರಂದು ಬೆಳಗ್ಗೆ ಹೊಟೇಲ್‌ನ ಸಿಬ್ಬಂದಿ, ತಂಗುವ ಕೊಠಡಿಯ ಸ್ನಾನದ ಕೋಣೆಯಲ್ಲಿ ಬಿದ್ದು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದರು. ಹೊಟೇಲಿನ ಇತರ ಸಿಬ್ಬಂದಿ ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಪರೀಕ್ಷಿಸಿದ ವೈದ್ಯರು ವಿಜಯ್ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.