
ಉಡುಪಿ: ಮಣಿಪಾಲದಲ್ಲಿ ಯುವಜೋಡಿಯೊಂದು ಸಾರ್ವಜನಿಕವಾಗಿ ಅಸಭ್ಯವಾಗಿ ವರ್ತಿಸಿದ್ದು, ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದೆ. ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ.
ನಿಮ್ಮ ಕನಸು ನನಸಾಗಿಸಲು ಮೆಗಾ ಗೋಲ್ಡ್ ಸೇವಿಂಗ್ಸ್ ಸ್ಕೀಮ್ ಸೇರಿ

ಗುಣಮಟ್ಟದ ಶಿಕ್ಷಣ ಪಡೆಯಲು ದೇಶದ ವಿವಿಧ ಮೂಲೆಗಳಿಂದ ವಿದ್ಯಾರ್ಥಿಗಳು ಮಣಿಪಾಲಕ್ಕೆ ಆಗಮಿಸುತ್ತಾರೆ. ಆದರೆ, ಇಲ್ಲಿನ ಹೈಟೆಕ್ ವ್ಯವಸ್ಥೆ ಮತ್ತು ಪಶ್ಚಿಮಾತ್ಯ ಸಂಸ್ಕೃತಿಯ ಪ್ರಭಾವದಿಂದ ಕೆಲವು ಯುವಕ-ಯುವತಿಯರು ಸಾರ್ವಜನಿಕ ಸ್ಥಳ ಎಂಬ ಅರಿವಿಲ್ಲದೆ ವಿದೇಶಿ ಪ್ರೇಮಿಗಳಂತೆ ವರ್ತಿಸುತ್ತಿದ್ದಾರೆ. ಸಾರ್ವಜನಿಕ ರಸ್ತೆಯಲ್ಲೇ ಪ್ರಣಯ ಸಲ್ಲಾಪಕ್ಕೆ ಇಳಿದಿದ್ದ ಈ ಜೋಡಿಯನ್ನು ಕಂಡು ಸ್ಥಳೀಯರು ತಕ್ಷಣವೇ ತರಾಟೆಗೆ ತೆಗೆದುಕೊಂಡಿದ್ದಾರೆ.

ಸ್ಥಳೀಯರು ಪ್ರಶ್ನಿಸಿದಾಗ ಜೋಡಿ ಅಸಹಜವಾಗಿ ವರ್ತಿಸಿದ್ದು, ಈ ವೇಳೆ ಮಾತಿನ ಚಕಮಕಿಯೂ ನಡೆದಿದೆ ಎನ್ನಲಾಗಿದೆ. ಯುವಜೋಡಿಯ ವಿಕೃತಿಯನ್ನು ಸ್ಥಳೀಯರು ಮೊಬೈಲ್‌ಗಳಲ್ಲಿ ಸೆರೆಹಿಡಿದಿದ್ದು, ಪೊಲೀಸರು ಇಂತಹ ಘಟನೆಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂಬ ಒತ್ತಾಯ ಕೇಳಿಬಂದಿದೆ.

ಸದ್ಯ ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.