ನದಿಯಲ್ಲಿ ಆಟವಾಡುತ್ತಿದ್ದ ಪ್ರವಾಸಿಗರ ಮೇಲೆ ಏಕಾಏಕಿ ಕಾಡಾನೆ ದಾಳಿ!!

ರಾಮನಗರ: ಕಾವೇರಿ ನದಿಯಲ್ಲಿ ಆಟವಾಡುತ್ತಿದ್ದ ಪ್ರವಾಸಿಗರ ಮೇಲೆ ಕಾಡಾನೆಯೊಂದು ಏಕಾಏಕಿ ದಾಳಿ ನಡೆಸಿದ ಘಟನೆ ಸಂಗಮ ಅರಣ್ಯ ಪ್ರದೇಶದ ಮೇಕೆದಾಟು ಬಳಿ ಶುಕ್ರವಾರ(ಏ.24) ನಡೆದಿದೆ.

ನಿಮ್ಮ ಕನಸು ನನಸಾಗಿಸಲು ಮೆಗಾ ಗೋಲ್ಡ್ ಸೇವಿಂಗ್ಸ್ ಸ್ಕೀಮ್ ಸೇರಿ

ಪ್ರವಾಸಿಗರು ನದಿಯಲ್ಲಿ ಆಟವಾಡುತ್ತಿದ್ದ ವೇಳೆ, ನೀರು ಕುಡಿಯಲು ಬಂದಿರುವ ಕಾಡನೆ ಇದ್ದಕ್ಕಿದ್ದಂತೆ ಪ್ರವಾಸಿಗರ ಮೇಲೆ ಎರಗಿದೆ. ದಾಳಿ ನಡೆಸುತ್ತಿದ್ದಂತೆ ಪ್ರವಾಸಿಗರು ದಿಕ್ಕಾಪಾಲಾಗಿ ಓಡಿದ್ದಾರೆ.

ಈ ವೇಳೆ ಮಹಿಳೆಯೊಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕೋಡಿಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

error: Content is protected !!