ಉಡುಪಿ: ನಾಪತ್ತೆಯಾಗಿದ್ದ ಸಂಸ್ಕೃತ ಉಪನ್ಯಾಸಕನ ಮೃತದೇಹ ಬಾವಿಯಲ್ಲಿ ಪತ್ತೆ

ಉಡುಪಿ: ಕಳೆದ ಕೆಲವು ದಿನಗಳಿಂದ ನಿಗೂಢವಾಗಿ ನಾಪತ್ತೆಯಾಗಿದ್ದ ಉಡುಪಿ ಸಂಸ್ಕೃತ ಕಾಲೇಜಿನ ಹಿರಿಯ ಉಪನ್ಯಾಸಕ ಗಣಪತಿ ಭಟ್ (55) ಅವರ ಕಥೆ ಅಂತಿಮವಾಗಿ ದುರಂತ ಅಂತ್ಯ ಕಂಡಿದೆ. ಶನಿವಾರ ಮಧ್ಯಾಹ್ನ ಅವರು ವಾಸವಿದ್ದ ಮನೆಯ ಬಾವಿಯಲ್ಲೇ ಅವರ ಮೃತದೇಹ ಪತ್ತೆಯಾಗಿದೆ. ಶಿರಸಿ ಮೂಲದವರಾದ ಇವರು ಉಡುಪಿಯ ಎಂ.ಜಿ.ಎಂ ಕಾಲೇಜು ಬಳಿಯ ಬಾಡಿಗೆ ಮನೆಯಲ್ಲಿ ಒಬ್ಬರೇ ವಾಸವಾಗಿದ್ದರು.

ಗಣಪತಿ ಭಟ್ ಅವರು ಸಂಸ್ಕೃತ ಪಾಂಡಿತ್ಯಕ್ಕೆ ಹೆಸರಾದವರು. ಆದರೆ, ಕಳೆದ ಕೆಲವು ದಿನಗಳಿಂದ ಅವರು ಯಾರಿಗೂ ಕಾಣಿಸದೆ ನಾಪತ್ತೆಯಾಗಿದ್ದರು. ಈ ಬಗ್ಗೆ ಉಡುಪಿ ನಗರ ಠಾಣೆಯಲ್ಲಿ ದೂರು ಕೂಡ ದಾಖಲಾಗಿತ್ತು. ಶನಿವಾರ ಮನೆಯ ಆವರಣದ ಬಾವಿಯಲ್ಲಿ ಶವ ತೇಲುತ್ತಿರುವುದನ್ನು ಕಂಡಾಗ ವಿಷಯ ಬೆಳಕಿಗೆ ಬಂದಿದೆ. ವೈಯಕ್ತಿಕ ಕಾರಣಗಳಿಂದ ಮನನೊಂದಿದ್ದ ಅವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪ್ರಾಥಮಿಕ ತನಿಖೆಯಿಂದ ಶಂಕಿಸಲಾಗಿದೆ.

ನಿಮ್ಮ ಕನಸು ನನಸಾಗಿಸಲು ಮೆಗಾ ಗೋಲ್ಡ್ ಸೇವಿಂಗ್ಸ್ ಸ್ಕೀಮ್ ಸೇರಿ

ಶವ ಪತ್ತೆಯಾದ ಸುದ್ದಿ ತಿಳಿಯುತ್ತಿದ್ದಂತೆಯೇ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಮೃತದೇಹವನ್ನು ಮೇಲೆತ್ತಲು ಶ್ರಮಿಸಿದರು. ಉಡುಪಿಯ ಖ್ಯಾತ ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ಮೃತದೇಹವನ್ನು ಜಿಲ್ಲಾಸ್ಪತ್ರೆಗೆ ರವಾನಿಸಲು ಸಹಕರಿಸಿದರು. ಪೊಲೀಸರು ಈ ಬಗ್ಗೆ ಮಹಜರು ನಡೆಸಿದ್ದು, ಮರಣೋತ್ತರ ಪರೀಕ್ಷೆಯ ವರದಿಯ ನಂತರ ಸಾವಿನ ಅಸಲಿ ಕಾರಣ ಹೊರಬರಬೇಕಿದೆ.

error: Content is protected !!