
ಮಂಗಳೂರು: ಮಂಗಳೂರು-ಬೆಂಗಳೂರು ರೈಲಿನಲ್ಲಿ ಮಹಿಳೆಯೊಬ್ಬರಿಗೆ ಹೆರಿಗೆ ನೋವು ಕಾಣಿಸಿದ್ದು, ತಕ್ಷಣ ಅದೇ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಕೆಲವು ಮಹಿಳೆಯರು ಸೇರಿ ಹೆರಿಗೆ ಮಾಡಿಸಿದ ಘಟನೆ ಬಂಟ್ವಾಳ ಸಮೀಪದ ಬಿ.ಸಿ.ರೋಡ್ ಬಳಿ ಭಾನುವಾರ(ಏ.26) ನಡೆದಿದೆ.

ಮಂಗಳೂರು ಜಂಕ್ಷನ್ನಿಂದ ಹೊರಟ ರೈಲಿನಲ್ಲಿ ಮೈಸೂರು ಮೂಲದ ತುಂಬು ಗರ್ಭಿಣಿಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದು, ರೈಲು ಬಿ.ಸಿ.ರೋಡ್ ತಲುಪಿದಾಗ ಗರ್ಭಿಣಿಗೆ ತೀವ್ರ ರಕ್ತಸ್ರಾವವೂ ಆಗಿದೆ. ವೈದ್ಯರಿಲ್ಲದೇ 30 ನಿಮಿಷದವರೆಗೂ ಕಾದ ಜನ ಬಳಿಕ, ತಕ್ಷಣ ರೈಲು ಸಂಚಾರವನ್ನು ಸ್ಥಗಿತಗೊಳಿಸ ಹೆರಿಗೆಗಾಗಿ ಪರದೆ ಕಟ್ಟಿ ರೈಲಿನಲ್ಲಿದ್ದ ಮಹಿಳೆಯರೇ ಹೆರಿಗೆ ಮಾಡಿಸಿದ್ದಾರೆ. ವೈದ್ಯಕೀಯ ಸೌಲಭ್ಯವಿಲ್ಲದೆ ತೀವ್ರ ರಕ್ತ ಸಾವ್ರದಿಂದ ಬಳಲುತ್ತಿದ್ದ ಮಹಿಳೆಗೆ ಸುರಕ್ಷಿತವಾಗಿ ಹೆರಿಗೆ ಮಾಡಿಸಲಾಗಿದೆ.
ನಿಮ್ಮ ಕನಸು ನನಸಾಗಿಸಲು ಮೆಗಾ ಗೋಲ್ಡ್ ಸೇವಿಂಗ್ಸ್ ಸ್ಕೀಮ್ ಸೇರಿ

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿ.ಸಿ ರೋಡ್‌ನಲ್ಲಿ ರೈಲು ನಿಲ್ಲಿಸಿ ಮಹಿಳೆಯರೇ ಹೆರಿಗೆ ಮಾಡಿಸಿದ್ದಾರೆ. ಸದ್ಯ ತಾಯಿ ಮಗು ಸುರಕ್ಷಿತವಾಗಿದ್ದು, ಬಂಟ್ವಾಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.