ತನ್ನ ಮದುವೆಗೆ ಆಹ್ವಾನಿಸಿದ ಯುವಕನಿಗೆ ಶುಭ ಕೋರಿ ಪತ್ರ ಬರೆದ ಪ್ರಧಾನಿ ಮೋದಿ

ಸಿಂಧನೂರು: ತನ್ನ ಮದುವೆಗೆ ಆಹ್ವಾನಿಸಿ ಯುವಕನೋರ್ವ ಬರೆದ ಪತ್ರಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಸ್ಪಂದಿಸಿದ್ದು, ಪ್ರಧಾನಿ ಮೋದಿ ಅವರು ಮದುವೆಗೆ ಶುಭ ಕೋರಿ ಬರೆದ ಪತ್ರಕ್ಕೆ ಯುವಕ ಸೇರಿ ಕುಟುಂಬಸ್ಥರು ಸಂತೋಷ ವ್ಯಕ್ತಪಡಿಸಿದ್ದಾರೆ.

ನಿಮ್ಮ ಕನಸು ನನಸಾಗಿಸಲು ಮೆಗಾ ಗೋಲ್ಡ್ ಸೇವಿಂಗ್ಸ್ ಸ್ಕೀಮ್ ಸೇರಿ

ತಾಲ್ಲೂಕಿನ ಕಾನಿಹಾಳ ಗ್ರಾಮದ ಯುವಕ ರಾಜೇಶ್ ನಾಯಕ ಅವರ ಮದುವೆ ಸವಿತಾ ಅವರೊಂದಿಗೆ ಏ.13 ರಂದು ನಿಗದಿಯಾಗಿತ್ತು. ತಮ್ಮ ಮದುವೆ ಸಂಭ್ರಮಕ್ಕೆ ಪ್ರಧಾನಿ ಮೋದಿಯವರನ್ನೂ ಆಹ್ವಾನಿಸಬೇಕೆಂದು ಬಯಸಿದ ರಾಜೇಶ್, ದೆಹಲಿಯ ಪ್ರಧಾನಿ ಕಚೇರಿಗೆ ಮದುವೆಯ ಆಹ್ವಾನ ಪತ್ರಿಕೆಯನ್ನು ಕಳುಹಿಸಿದ್ದರು. ಈ ಆಹ್ವಾನವನ್ನು ಸ್ವೀಕರಿಸಿದ ಪ್ರಧಾನಿ ಮೋದಿ ಅವರು ಪತ್ರದ ಮೂಲಕ ನವಜೋಡಿಗೆ ಶುಭ ಹಾರೈಸಿದ್ದಾರೆ.

ಈ ಹಿನ್ನಲೆಯಲ್ಲಿ ರಾಜೇಶ್ ನಾಯಕ್ ಅವರಿಗೆ ಪತ್ರ ಬರೆದಿರುವ ಪ್ರಧಾನಿ ಮೋದಿ, “ನಿಮ್ಮ ವಿವಾಹ ಮಹೋತ್ಸವಕ್ಕೆ ನನ್ನನ್ನು ಆಹ್ವಾನಿಸಿದ್ದಕ್ಕಾಗಿ ಹೃತ್ಪೂರ್ವಕ ಧನ್ಯವಾದಗಳು. ಜೀವನದ ಈ ಶುಭ ಸಂದರ್ಭಕ್ಕೆ ಕಾಲಿಡುತ್ತಿರುವ ನಿಮಗೆ ಮತ್ತು ಸವಿತಾ ಅವರಿಗೆ ಸುಂದರ ಭವಿಷ್ಯಕ್ಕಾಗಿ ಶುಭಾಶೀರ್ವಾದಗಳು” ಎಂದು ಹಾರೈಸಿದ್ದಾರೆ.

error: Content is protected !!