
ನೆಲ್ಯಾಡಿ: ಕಂಟೈನರ್ ಹಾಗೂ ಟ್ಯಾಂಕರ್ ಲಾರಿ ನಡುವೆ ಡಿಕ್ಕಿ ಸಂಭವಿಸಿ ಎರಡೂ ವಾಹನಗಳು ಜಖಂಗೊಂಡ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಗ್ರಾಮದ ಗುಂಡ್ಯದಲ್ಲಿ ನಡೆದಿದೆ.
ನಿಮ್ಮ ಕನಸು ನನಸಾಗಿಸಲು ಮೆಗಾ ಗೋಲ್ಡ್ ಸೇವಿಂಗ್ಸ್ ಸ್ಕೀಮ್ ಸೇರಿ

ಶ್ಯಾಮ್‌ಕುಮಾರ್ ಟಿ.ವಿ.ಎಂಬವರು ಟ್ಯಾಂಕರ್‌ನಲ್ಲಿ ಬೆಂಗಳೂರಿನಿಂದ ಕಚ್ಚಾ ತೈಲ ಲೋಡ್ ಮಾಡಿಕೊಂಡು ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಪಡುಬಿದ್ರೆಗೆ ಹೊರಟು ಬಂದಿದ್ದು ಶಿರಾಡಿ ಗ್ರಾಮದ ಗುಂಡ್ಯ ಎಂಬಲ್ಲಿಗೆ ತಲುಪಿದಾಗ ಮಂಗಳೂರಿನಿಂದ ಬೆಂಗಳೂರಿಗೆ ಹೋಗುತ್ತಿದ್ದ ಕಂಟೈನರ್ ಲಾರಿ ಡಿಕ್ಕಿಯಾಗಿದೆ. ಪರಿಣಾಮ ಟ್ಯಾಂಕರ್ ಹಿಂದಕ್ಕೆ ಚಲಿಸಿ ಹೆದ್ದಾರಿ ಬದಿಯ ಹೊಂಡಕ್ಕೆ ಬಿದ್ದಿದೆ. ಘಟನೆಯಲ್ಲಿ ಎರಡೂ ವಾಹನಗಳು ಜಖಂಗೊಂಡಿವೆ.

ಟ್ಯಾಂಕರ್ ಚಾಲಕ ಶ್ಯಾಮ್‌ಕುಮಾರ್ ಟಿ.ವಿ. ಅವರು ನೀಡಿದ ದೂರಿನಂತೆ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.